Bhasaka
← Back to home

ದಾಸ ದಾಸರ ಮನೆಯ ದಾಸಿಯರ ಮಗ ನಾನು

Author: ಕನಕದಾಸCategory: ಶ್ರೀಕೃಷ್ಣ
ದಾಸ ದಾಸರ ಮನೆಯ ದಾಸಿಯರ ಮಗ ನಾನುಸಾಸಿರ ನಾಮದೊಡೆಯ ರಂಗಯ್ಯನ ಮನೆಯ ಶಂಕು ದಾಸರ ಮನೆಯ ಮಂಕುದಾಸನು ನಾನುಮಂಕುದಾಸನು ನಾನು ಮರುಳುದಾಸಸಂಕೀರ್ತನೆಯ ಮಾಡಿ ನೆನೆವ ಭಕ್ತರ ಮನೆಯ ಬಿಂಕದಿ ಬಾಗಿಲ ಕಾಯ್ವ ಬಡ ದಾಸ ನಾನಯ್ಯ ||1|| ಕಾಳಿದಾಸರ ಮನೆಯ ಕೀಳುದಾಸನು ನಾನುಆಳುದಾಸನು ನಾನು ಮೂಳದಾಸಫಾಲಾಕ್ಷ ಸಖ ನಿನ್ನ ಭಜಿಪ ಭಕ್ತರ ಮನೆಯಆಳಿನಾಳಿನ ದಾಸ ಅಡಿದಾಸ ನಾನಯ್ಯ ||2|| ಹಲವು ದಾಸರ ಮನೆಯ ಹೊಲೆಯ ದಾಸನು ನಾನುಕುಲವಿಲ್ಲದ ದಾಸ ಕುರುಬ ದಾಸಛಲದಿ ನಿನ್ನ ಭಜಿಪರ ಮನೆಯ ಮಾದಿಗ ದಾಸಸಲೆ ಮುಕ್ತಿ ಪಾಲಿಸೆನ್ನೊಡೆಯ ಕೇಶವನೆ ||3||

Thoughts & Reflections

0

No reflections shared yet. Be the first to share your thoughts!

Share your thought