Bhasaka
← Back to home

ನಮಗೆಲ್ಲಿ ಮನೆಗಳಯ್ಯ ನಾರಾಯಣ

Author: ಕನಕದಾಸCategory: ಶ್ರೀಕೃಷ್ಣRaaga: ಶಂಕರಾಭರಣTaala: ಆದಿತಾಳ
ನಮಗೆಲ್ಲಿ ಮನೆಗಳಯ್ಯ ನಾರಾಯಣ ಕಮಲ ಬ್ರಹ್ಮಾಂಡ ಕೋಟಿ ಒಡಲೊಳು ತಾಳ್ದಂಥರ ಮಾಧವ ನಿಮಗೆ ನೀರೊಳಗೆ ವಾಸವಾಯಿತು ಜಲನಿಧಿಯನುತ್ತರಿಸಿ ಲಂಕೆಯನೈವುದಕೆ ಕುಲಗಿರಿಯ ಕಿತ್ತು ತಂದು ಸೇತುವೆ ಕಟ್ಟಿಸಲೆ ದೈತ್ಯನ ಕೊಂದು ಸೀತೆಯ ತಂದನಿಗೆ ಗಿರಿ ತಲೆಯ ಮೇಲೆ ಇಹ ಪ್ರಾಪ್ತಿಯಾಯಿತು ||1|| ಪೃಥ್ವಿಯ ತಲೆಯನು ಪರೆಮಾಡಿ ತಾಳಿದ ಳುತ್ಯಾನಮಮ್ಮನ ತಂದೆಯ ಮೆಲುವನ ಮೃತ್ಯುನಾಶಕನೆಂದು ಸುತ್ತಿದ್ದಾನೆ ಹುತ್ತಿನೊಳಗೆ ಇಹ ಪ್ರಾಪ್ತಿಯಾಯಿತು ||2|| ನಾಡದೇವತೆಗಳ ಸೆರೆಗಳ ಬಿಡಿಸಿ ಕ್ರೀಡೆಯಾಯಿತು ನಿಮ್ಮ ದಯದಿಂದಲಿ ರೂಢಿಯೊಳತಿ ಸೇವಕನಾದ ಗರುಡನಿಗೆ ಬೋಡು ಮರದ ಮೇಲೆ ಇಹ ಪ್ರಾಪ್ತಿಯಾಯಿತು ||3|| ಜಲನಿಧಿ ಸುತನ ಮೊಮ್ಮಗನ ಕೊಂದ ಶೂರ ನಕುಲ ಸಹದೇವ ಪಾಂಡವರೈವರು ಲಲನೆ ದ್ರೌಪದಿಯೊಂದಿಗೆ ವನವಾಸ ಹೋಗಿ ಹೊಲದೊಳಗೆ ಇಹ ಪ್ರಾಪ್ತಿಯಾಯಿತು||4|| ಇಂಥಿಂಥವರಿಗೆಲ್ಲ ಮನೆಯಿಲ್ಲದಿರಲು ನ- ನ್ನಂಥವನಿಗಿನ್ನೆಲ್ಲಿ ಇರಲು ಸಾಧ್ಯ ಕಂತುಪಿತ ಕಾಗಿನೆಲೆಯಾದಿಕೇಶವನೆ ನಿ- ಶ್ಚಿಂತನಾಗಿ ನಿಮ್ಮ ಗುಡಿಯಲಿಪ್ಪೆನು ||5||

Thoughts & Reflections

0

No reflections shared yet. Be the first to share your thoughts!

Share your thought