Bhasaka
← Back to home

ನಾರಾಯಣ ಎಂಬ ನಾಮದ ಬೀಜವನು

Author: ಕನಕದಾಸCategory: ಶ್ರೀಕೃಷ್ಣRaaga: ಕಾಂಬೋಧಿTaala: ಝಂಪೆತಾಳ
ನಾರಾಯಣ ಎಂಬ ನಾಮದ ಬೀಜವನು ನಾಲಗೆಯ ಕೂರಿಗೆಯ ಮಾಡಿ ಬಿತ್ತಿರಯ್ಯ ||ಪ|| ತನುವ ನೇಗಿಲು ಮಾಡಿ ಹೃದಯ ಹೊಲವನು ಮಾಡಿ ತನ್ವಿರಾ ಎಂಬ ಎರಡೆತ್ತು ಹೂಡಿ ಜ್ಞಾನವೆಂಬೊ ಮಿಣಿಯ ಕಣ್ಣಿ ಹಗ್ಗವ ಮಾಡಿ ಧ್ಯಾನವೆಂಬ ಧಾನ್ಯವ ನೋಡಿ ಬಿತ್ತಿರಯ್ಯ ||1|| ಕಾಮಕ್ರೋಧಗಳೆಂಬ ಗಿಡಗಳನು ತರಿಯಿರಯ್ಯ ಮದಮತ್ಸರವೆಂಬ ಪೊದೆಯ ಹಿರಿಯಿರಯ್ಯ ಪಂಚೇಂದ್ರಿಯಗಳೆಂಬ ಮಂಚಿಕೆಯ ಹಾಕಿರಯ್ಯ ಚಂಚಲವೆಂಬ ಹಕ್ಕಿಯ ಓಡಿಸಿರಯ್ಯ||2|| ಉದಯಾಸ್ತಮಾನವೆಂಬ ಎರಡು ಕೊಳಗವ ಮಾಡಿ ಆಯು ಶ್ಯದ ರಾಶಿಯನು ಅಳೆಯಿರಯ್ಯ ಇದು ಕಾರಣ ಕಾಗಿನೆಲೆಯಾದಿಕೇಶವನ ಮುದದಿಂದ ನೆನೆನೆನೆದು ಸುಖಿಯಾಗಿರಯ್ಯ ||3||

Thoughts & Reflections

0

No reflections shared yet. Be the first to share your thoughts!

Share your thought