Bhasaka
← Back to home

ನಾರಾಯಣೆನು ಮನವೆ ನರಹರಿಯ ನೆನೆ ಮನವೆ

Author: ಕನಕದಾಸCategory: ಶ್ರೀಕೃಷ್ಣRaaga: ಕಾಂಬೋಧಿTaala: ಝಂಪೆತಾಳ
ನಾರಾಯಣೆನು ಮನವೆ ನರಹರಿಯ ನೆನೆ ಮನವೆ ಘೋರ ದುರಿತಗಳ ಬೆದರಿಸಿ ಓಡಿಸುವುದು ||ಪ|| ಗುರುವಿನುಪದೇಶದಲಿ ಪರಮ ರಹಸ್ಯವನರಿತು ಮರೆಯದಲೆ ಅಲ್ಲಿ ಅಧಿಕಾರಿಯಾಗೊ ತಿರುಮಂತ್ರವನು ಜಪಿಸು ತಿರುಲಾಂಛನವ ಧರಿಸು ಪರಮ ವೈಷ್ಣವರ ಪಂಕ್ತಿಯ ಸೇರು ಮನವೆ ||1|| ಕುಲಛಲಂಗಳ ಬಿಟ್ಟು ಬಲು ಪಾಶಗಳ ತರಿದು ಹಲವು ಕೊಂಬೆಗೆ ನೀನು ಹರಿದಾಡದೆ ಸುಲಭದಲಿ ಶ್ರೀಪಾದತೀರ್ಥ ಪ್ರಸಾದವನು ನೆಲೆಗೊಳಿಸಿ ಆತ್ಮನಿಗೆ ನಿತ್ಯ ಸುಖಿಯಾಗೊ ||2|| ಶೇಷವಿಶೇಷವೆಂದೆನಿಪ ಪರಮಾರ್ಥದೊಳು ಮೀಸಲಳಿಯದ ಪಾಪರಹಿತನಾಗು ವಾಸಾಧಿಪತಿ ಕಾಗಿನೆಲೆಯಾದಿಕೇಶವನ ದಾಸಾನುದಾಸರಿಗೆ ದಾಸ ನೀನಾಗೊ ||3||

Thoughts & Reflections

0

No reflections shared yet. Be the first to share your thoughts!

Share your thought