Bhasaka
← Back to home

ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ

Author: ಕನಕದಾಸCategory: ಶ್ರೀಕೃಷ್ಣRaaga: ಕಾಂಬೋಧಿTaala: ಝಂಪೆತಾಳ
ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ ||ಪ|| ನೀ ದೇಹದೊಳಗೊ ನಿನ್ನೊಳು ದೇಹವೊ ಹರಿಯೆ ||ಅ|| ಬಯಲೊಳಗೆ ಆಲಯವೊ ಆಲಯದೊಳಗೆ ಬಯಲೊ ಬಯಲು ಆಲಯವೆರಡು ನಯನದೊಳಗೊ ನಯನ ಬುದ್ಧಿಯ ಒಳಗೊ ಬುದ್ಧಿ ನಯನದ ಒಳಗೊ ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ ||1|| ಸವಿಯು ಸಕ್ಕರೆಯೊಳಗೊ ಸಕ್ಕರೆಯು ಸವಿಯೊಳಗೊ ಸವಿಯು ಸಕ್ಕರೆ ಎರಡು ಜಿಹ್ವೆಯೊಳಗೊ ಜಿಹ್ವೆ ಮನಸಿನ ಒಳಗೊ ಮನಸು ಜಿಹ್ವೆಯ ಒಳಗೊ ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ ||2|| ಕುಸುಮದಲಿ ಗಂಧವೋ ಗಂಧದಲಿ ಕುಸುಮವೋ ಕುಸುಮ ಗಂಧಗಳೆರಡು ಆಘ್ರಾಣದೊಳಗೊ ಅಸಮಭವ ಕಾಗಿನೆಲೆಯಾದಿಕೇಶವರಾಯ ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೊ ಹರಿಯೆ ||3||

Thoughts & Reflections

0

No reflections shared yet. Be the first to share your thoughts!

Share your thought