Bhasaka
← Back to home

ನೆಚ್ಚದಿರು ಸಂಸಾರ ನೆಲೆಯಲ್ಲವೀ ಕಾಯ

Author: ಕನಕದಾಸCategory: ವೈರಾಗ್ಯRaaga: ಕಲ್ಯಾಣೀTaala: ಛಾಪುತಾಳ
ನೆಚ್ಚದಿರು ಸಂಸಾರ ನೆಲೆಯಲ್ಲವೀ ಕಾಯ ಅಚ್ಯುತನ ನಾಮವನು ನೆನೆದು ಸುಖಿಯಾಗೊ ||ಪ|| ಗಳಿಸದಿರು ಸೀಮೆಯನು ಗಳಿಸದಿರು ದ್ರವ್ಯವನು ಗಳಿಸದಿರು ನೀ ದುರಿತರಾಶಿಗಳನು ನಳಿನನಾಭನ ದಿವ್ಯ ನಾಮವನು ನೆನೆನೆನೆದು ನೆಲೆಯಾದ ಪರಮ ಪದವಿಯ ಪಡೆಯೊ ಮನವೆ ||1|| ನೋಡದಿರು ಪರಸತಿಯ ಕೂಡದಿರು ದುರ್ಜನರ ಆಡದಿರು ಮಾತುಗಳ ಗರ್ವದಿಂದ ಬೇಡದಿರು ಕೈಯ ಹಿಂದೆಗೆವ ಲೋಭಿಯನು, ಕೊಂ ಡಾಡದಿರು ಬೀದಿಗೂಳುಂಬ ದೈವಗಳ ||2|| ನಾನಾ ಜನ್ಮದಿ ಬಂದ ನಾಟಕದ ಬೊಂಬೆಯಿದು ಮಾನಕ್ಕೆ ಮೆಚ್ಚಿ ನೀ ಮರುಳಾಗದೆ ಜಾಣತನದಿಂ ಕಾಗಿನೆಲೆಯಾದಿಕೇಶವನ ಮಾನಸದಲಿ ನೆನೆದು ಸುಖಿಯಾಗು ಮನುಜ ||3||

Thoughts & Reflections

0

No reflections shared yet. Be the first to share your thoughts!

Share your thought