Bhasaka
← Back to home

ಪಥ ನಡೆಯದಯ್ಯ ಪರಲೋಕ

Author: ಕನಕದಾಸCategory: ವೈರಾಗ್ಯRaaga: ಸಾವೇರೀTaala: ಝಂಪೆತಾಳ
ಪಥ ನಡೆಯದಯ್ಯ ಪರಲೋಕ ಸಾಧನಕೆ- ಮ ನ್ಮಥನೆಂಬ ಖಳನು ಮಾರ್ಗವ ಕಟ್ಟಿ ಸುಲಿಯುತ್ತಿರೆ ||ಪ|| ತನುರೋಮ ಗಿಡ ವೃಕ್ಷ ತಳಿತ ಭುಜಲತೆ ಮೆರೆವ ಘನಸಿಂಹ ಗಜ ಮೃಗಗಳಿಂದೊಪ್ಪುವ ವನಿತೆಯರ ಕಾಯ ಕಾಂತಾರವೆಂಬ ಮಾರ್ಗದಿ ಸ್ತನದ್ವಯ ಕಣಿವೆಯ ಮಧ್ಯ ಸೇರಿಹನು ||1|| ಗಿಳಿ ನವಿಲು ಕೋಗಿಲೆ ವಸಂತ ಭ್ರಮರಂಗಳ ಬಲದೊಡನೆ ಮದನ ಮಾರ್ಗವ ಕಟ್ಟಲು ಬಲವುಳ್ಳ ಭಕ್ತ ಮುನಿ ಸಂನ್ಯಾಸಿ ಯೋಗಿಗಳು ಸುಲಿಸಿಕೊಂಡರು, ಕೆಲರು ಸಿಕ್ಕಿದರು ಸೆರೆಯ ||2|| ಕಾಳಗದೊಳಿದಿರಿಲ್ಲ ಸುರರು ದಾನವರು- ಕ ಟ್ಟಾಳು ಮನ್ಮಥನ ಛಲದಂಕ ಬಿರುದು ಪೇಳಲೆನ್ನಳವೆ ಬಡದಾದಿಕೇಶವರಾಯ- ನಾಳ ಸಂಗಡ ಹೋದರಾವ ಭಯವಿಲ್ಲ ||3||

Thoughts & Reflections

0

No reflections shared yet. Be the first to share your thoughts!

Share your thought