Bhasaka
← Back to home

ಪೂರ್ವ ಜನ್ಮದಲಿ ನಾ ಮಾಡಿದ ಕರ್ಮದಿಂ

Author: ಕನಕದಾಸCategory: ಶ್ರೀಕೃಷ್ಣRaaga: ಮುಖಾರಿTaala: ಝಂಪೆತಾಳ
ಪೂರ್ವ ಜನ್ಮದಲಿ ನಾ ಮಾಡಿದ ಕರ್ಮದಿಂ ಉರ್ವಿಯೊಳು ಜನಿಸಿದೆನೊ ಕೃಷ್ಣ ಕಾರುಣ್ಯನಿಧಿ ಎನ್ನ ಕಾಯಬೇಕಯ್ಯ ಹರಿವಾರಿಜನಾಭನೆ ಮುದ್ದುಕೃಷ್ಣ ಪುಟ್ಟಿದಂದಿನಾರಭ್ಯ ಸುಖವೆಂಬುವುದನರಿಯೆ ಕಷ್ಟ ಪಟ್ಟೆನು ಕೇಳೋ ಕೃಷ್ಣ ತೊಟ್ಟಿಲ ಶಿಶು ತಾಯ್ಗೆ ಬಾಯ್ಬಿಟ್ಟ ತೆರದಿ ಕಂ- ಗೆಟ್ಟು ಶೋಕಿಪೆನೋ ಕೃಷ್ಣ ಮುಟ್ಟಲಮ್ಮರು ಎನ್ನ ಬಂಧುಗಳು ಕಂಡರೆ ಅಟ್ಟಿ ಬಡಿವುತಲಿಹರೊ ಕೃಷ್ಣ ದಟ್ಟ ದಾರಿದ್ರ್ಯವನು ಪರಿಹರಿಸದಿದ್ದರೆ ಮುಟ್ಟುವುದು ದೂರು ನಿನಗೆ ಕೃಷ್ಣ||1|| ಕಾಶಿಯಾ ವಾಸವನು ಬಯಸಿ ಬಹು ದಿನದಿಂದ ಘಾಸಿ ಪಟ್ಟೆನು ನಾನು ಕೃಷ್ಣ ಈ ಶರೀರವನಾಂತು ಹೀನಾಯಗೊಂಡೆನು ನೀ ಸಲಹಬೇಕಯ್ಯ ಕೃಷ್ಣ ಹೇಸಿಗೆಯ ಸಂಸಾರದಿ ನೀನಿಂತು ಮಾಯಾಪಾಶದೊಳು ಬಿಗಿವರೇ ಕೃಷ್ಣ ಘಾಸಿ ಮಾಡದೆ ಎನ್ನ ಪಾಪವನು ಪರಿಹರಿಸೊ ಸಾಸಿರನಾಮದ ಮುದ್ದುಕೃಷ್ಣ ||2|| ಲೋಕದೊಳು ಎನ್ನಂಥ ಪಾಪಿಗಳು ಉಂಟೆಂದು ನೀ ಕೇಳಿ ಬಲ್ಲೆಯಾ ಕೃಷ್ಣ ಸಾಕೇಳು ಎನಗೊಂದು ಗತಿಯ ತೋರಿಸಿ ಸದ್ವಿವೇಕಿಯನು ಮಾಡಯ್ಯ ಕೃಷ್ಣ ರಾಕೇಂದು ಮುಖಿ ದ್ರೌಪದಿಯ ಮಾನವನು ಕಾಯ್ದು ಆಕೆಗಕ್ಷಯವಿತ್ತೆ ಕೃಷ್ಣ ನಾ ಕಾಣುವಂದದಲಿ ಉಡುಪಿಯಾದಿಕೇಶವ ಏಕೆ ದರಶುನವೀಯೆ ಕೃಷ್ಣ ||3||

Thoughts & Reflections

0

No reflections shared yet. Be the first to share your thoughts!

Share your thought