Bhasaka
← Back to home

ಬಂದೆವಯ್ಯ ಗೋವಿಂದಶೆಟ್ಟಿ

Author: ಕನಕದಾಸCategory: ಶ್ರೀಕೃಷ್ಣRaaga: ಪೂರ್ವೀTaala: ಆಟತಾಳ
ಬಂದೆವಯ್ಯ ಗೋವಿಂದಶೆಟ್ಟಿ- ನಿಮ್ಮ ಹರಿವಾಣ ತೀರ್ಥಪ್ರಸಾದ ಉಂಟೆನಲಾಗಿ ||ಪ|| ಅಪ್ಪವು ಅತಿರಸ ತುಪ್ಪವು ಚಿನಿಪಾಲು ಒಪ್ಪುವ ಸಕ್ಕರೆ ಯಾಲಕ್ಕಿಯು ಅಪರೂಪವಾದ ಕಜ್ಜಾಯಗಳನೆಲ್ಲ ಛಪ್ಪನ್ನ ದೇಶಕ್ಕೆ ಮಾರುವ ಶೆಟ್ಟಿ ||1|| ಒಡೆದ ಮಡಕೆ ತಂದು ಇಡಿದು ನಾಮವ ಮಾಡಿ ಕೊಡುವೆ ನೀ ಕಾಸಿಗೆ ಒಂದೊಂದನು ಒಡಲು ತುಂಬಿ ಮಿಕ್ಕ ಅನ್ನವ ಮಾರಿಸಿ ಒಡವೆಯ ಗಳಿಸುವ ಕಡುಲೋಭಿ ಶೆಟ್ಟಿ ||2|| ಶೇಷಗಿರಿಯಲ್ಲಿ ವಾಸ ಮಾಡಿಕೊಂಡು ದೇಶದೇಶಕ್ಕೆ ಹೆಸರಾದ ಶೆಟ್ಟಿ ಕಾಸುಕಾಸಿಗೆ ಬಡ್ಡಿ ಗಳಿಸಿಕೊಂಬ ಆದಿ ಕೇಶವ ನಾರಾಯಣ ತಿಮ್ಮ ಶೆಟ್ಟಿ ||3||

Thoughts & Reflections

0

No reflections shared yet. Be the first to share your thoughts!

Share your thought