Bhasaka
← Back to home

ಬಲ್ಲವರೆ ಬಲ್ಲರು ಎಲ್ಲವರು ಅರಿಯರು

Author: ಕನಕದಾಸCategory: ಶ್ರೀಕೃಷ್ಣRaaga: ಆರಭಿTaala: ಆಟತಾಳ
ಬಲ್ಲವರೆ ಬಲ್ಲರು ಎಲ್ಲವರು ಅರಿಯರು ಪುಲ್ಲಲೋಚನ ಪರಬ್ರಹ್ಮನೆಂಬುದನು ||ಪ|| ಅಜಜ್ಞಾನಾಧಿಕ ಬಲ್ಲ ಅನಲಸ್ನೇಹಿತ ಬಲ್ಲ ಗಜ ಚರ್ಮಾಂಬರ ಬಲ್ಲ ಗರುಡ ಬಲ್ಲ ಭುಜಗೇಶ್ವರ ಬಲ್ಲ ಭೂರಿಲೋಚನ ಬಲ್ಲ ತ್ರಿಜಗದಧಿಪತಿ ತ್ರಿವಿಕ್ರಮನೆಂಬುವನು ||1|| ಶುಕಯೋಗೀಶ್ವರ ಬಲ್ಲ ಸುಗುಣ ನಾರದ ಬಲ್ಲ ಭಕುತ ಪ್ರಹ್ಲಾದ ಬಲ್ಲ ಬಲಿಯು ಬಲ್ಲ ರುಕುಮಾಂಗದ ಬಲ್ಲ ಋಷಿ ಪರಾಶರ ಬಲ್ಲ ಮಕರಕುಂಡಲಧರ ಪರಾತ್ಪರನೆಂಬುದನು ||2|| ಅಂಬರೀಶನು ಬಲ್ಲ ಅತ್ತಿ ಋಷಿಯು ಬಲ್ಲ ಸಂಭ್ರಮದಿ ಮನು ಬಲ್ಲ ಸಹದೇವ ಬಲ್ಲ ಬೆಂಬಿಡದುದ್ಧವ ಬಲ್ಲ ಬೇಡಿದ ಧ್ರುವ ಬಲ್ಲ ಕಂಬು ಚಕ್ರಧರ ಕರ್ಮಹರನೆಂಬುದನು ||3|| ವಶಿಷ್ಠ ಮುನಿ ಬಲ್ಲ ವರ ವಿಭೀಷಣ ಬಲ್ಲ ವಿಶಿಖಶಯನ ಬಲ್ಲ ವಿದುರ ಬಲ್ಲ ಋಷಿ ವಾಲ್ಮೀಕಿ ಬಲ್ಲ ರಾಜ ವಿದೇಹ ಬಲ್ಲ ಶಶಿ ಮಿತ್ರನೇತ್ರ ಸರ್ವೋತ್ತಮನಂಬುದನು ||4|| ವಾಗಿನಿಂದಕ್ರೂರ ಬಲ್ಲ ವಚನಿ ಶೌನಕ ಬಲ್ಲ ಯೋಗಿ ಕಪಿಲ ಬಲ್ಲ ಭೃಗು ಬಲ್ಲನು ತ್ಯಾಗಿ ಧರ್ಮಜ ಬಲ್ಲ ರಣದೊಳರ್ಜುನ ಬಲ್ಲ ಕಾಗಿನೆಲೆಯಾದಿಕೇಶವ ಕೈವಲ್ಯನೆಂಬುವನು ||5||

Thoughts & Reflections

0

No reflections shared yet. Be the first to share your thoughts!

Share your thought