Bhasaka
← Back to home

ಬೊಂಬೆಯಾಟವನಾಡಿಸಿದೆ ಮಹಾಭಾರತದ

Author: ಕನಕದಾಸCategory: ಶ್ರೀಕೃಷ್ಣRaaga: ಮುಖಾರಿTaala: ಝಂಪೆತಾಳ
ಬೊಂಬೆಯಾಟವನಾಡಿಸಿದೆ ಮಹಾಭಾರತದ ||ಪ|| ಅಂಬುಜಭವಾದಿ ಅಮರರು ನೋಡುತಿರಲು ||ಅ|| ಕುರುಭೂಮಿಯೆಂಬ ಪುರವೀಧಿಯನು ರಚಿಸಿ ಮರೆಯ ಮಾಯದ ಐದು ತೆರೆಯ ಹಾಕಿ ಧರಣೀಶರೆಂಬ ನರಪ್ರತಿಮೆಗಳನಳವಡಿಸಿ ನರನ ರಥವಾಜಿಯ ಸೂತ್ರವನು ಪಿಡಿದು ||1|| ಓದುವನು ನಾರದನು ವಾದ್ಯಕಾರನೆ ಶಂಭು ಬಾದರಾಯಣದೇವ ಕಥಾಪ್ರಸಂಗಿ ಮೇದಿನಿಯ ಹೊರೆಗಳೆವ ಮೃತ್ಯುವಿನ ಹಾಸ್ಯರಸ ವೇದನಿಕರಗಳು ಕೈವಾರಿಸುತಿರಲು ||2|| ಹದಿನೆಂಟು ಅಕ್ಷೋಹಿಣಿ ಮಾರ್ಬಲವ ನೆರೆಸಿ ಹದಿನೆಂಟು ದಿನ ಕದನಕೇಳಿಕೆ ನಡೆಸಿ ಅದರೊಳ್ಳೆಯವರನುಳುಹಿ ಅವನಿಭಾರವನಿಳುಹಿ ಮುದದಿ ಬ್ರಹ್ಮಕಪಾಲವನು ತೃಪ್ತಿಗೊಳಿಸಿ ||3|| ಲೋಕದೊಳಗೈದನೆಯ ವೇದವಿದೆಂದೆನಿಸಿ ಪಾಕಶಾಸನ ಸಭೆಯನು ಮೆಚ್ಚಿಸಿ ಈ ಕಥೆಯ ಕೇಳಿದ ಜನಮೇಜಯನ ಪತಿಕರಿಸಿ ತಾ ಕಪಟನಾಟಕದ ಸೂತ್ರಧಾರನೆನಿಸಿ ||4|| ಇಂತೆಸೆವ ಲೀಲಾವಿನೋದ ರಚನೆಗಳಿಂದ ಲೋ ಕಾಂತರಂಗಳ ಸಂಚರಿಸುತ ಸಂತಸದಿ ಭರತ ಸಂಸಾರವನು ಪೊರೆವ ವೇ ದಾಂತನುತ ಕಾಗಿನೆಲೆಯಾದಿಕೇಶವರಾಯ ||5||

Thoughts & Reflections

0

No reflections shared yet. Be the first to share your thoughts!

Share your thought