Bhasaka
← Back to home

ಮರೆಯದಿರು ಮರೆಯದಿರು ಮನುಜಾ

Author: ಕನಕದಾಸCategory: ಶ್ರೀಕೃಷ್ಣRaaga: ಸಾರಂಗTaala: ಆಟತಾಳ
ಮರೆಯದಿರು ಮರೆಯದಿರು ಮನುಜಾ ನಾರಾಯಣನ ಸ್ಮರಣೆಯನು ಮಾಡು ಮನುಜಾ ||ಪ|| ರಂಗನಾಥನು ಇರಲಿಕ್ಕೆ ಜಂಗುಳಿ ದೈವಗಳೇಕೆ ತುಂಗಭದ್ರೆ ಇರಲಿಕ್ಕೆ ಕೆರೆ ಬಾವಿಯೇಕೆ ಅಂಗನೆ ಸತಿ ಇರಲಿಕ್ಕೆ ಬಣಗು ಹೆಣ್ಣುಗಳೇಕೆ ಮಂಗಳಾತ್ಮನಿರಲಿಕ್ಕೆ ಪರದೈವವೇಕೆ ||1|| ಹಾಲು ಹಳ್ಳವಿರಲಿಕ್ಕೆ ವಾಳಿಯವ ತರಲೇಕೆ ಮೇಲುನಾಮವಿರಲಿಕ್ಕೆ ಕಟುಕು ಇನ್ನೇಕೆ ಬಾಲಹನುಮನಿರಲಿಕ್ಕೆ ಹುಲುಕಪಿಗಳೇಕೆ ಒಳ್ಳೆ ತುಳಸಿಯಿರಲಿಕ್ಕೆ ಕಗ್ಗೊರಲೆಯೇಕೆ ||2|| ಚಿನ್ನದ ಗಿರಿಯಿರಲಿಕ್ಕೆ ಕಬ್ಬಿಣದ ಮೊರಡಿಯೇಕೆ ರನ್ನ ಮಾಣಿಕವಿರಲಿಕ್ಕೆ ಕಾಜಿನ ಹರಳೇಕೆ ಅನ್ನ ತುಪ್ಪವಿರಲಿಕ್ಕೆ ಮದ್ಯಪಾನಗಳೇಕೆ ಚೆನ್ನಾದಿಕೇಶವನಿರೆ ಬಿನುಗು ದೈವಗಳೇಕೆ ||3||

Thoughts & Reflections

0

No reflections shared yet. Be the first to share your thoughts!

Share your thought