Bhasaka
← Back to home

ಮಾಡು ದಾನ ಧರ್ಮ ಪರ

Author: ಕನಕದಾಸCategory: ಇತರೆRaaga: ಸೌರಾಷ್ಟ್ರTaala: ಆಟತಾಳ
ಮಾಡು ದಾನ ಧರ್ಮ ಪರ ಉಪಕಾರದ ಮರೆಯದಿರೆಚ್ಚರಿಕೆ ||ಪ|| ಕೇಡು ನೆನೆಯಬೇಡ ನಂಬಿದವರ ಮೇಲೆ ಕೆಡುವೆ ನೀನೆಚ್ಚರಿಕೆ ||ಅ|| ಬಾಳು ಬದುಕು ಸಿರಿ ಇರುವಾಗ ಬಂಧುಬಳಗಗಳೆಚ್ಚರಿಕೆ ಹಾಳು ಸಂಸಾರಕ್ಕೆ ಹಲವರ ಬಾಯ್ಗಳ ಬಡಿಯದಿರೆಚ್ಚರಿಕೆ ||1|| ಮೂಢರ ಒಡನಾಡಿ ಮುಂದೆ ಕೆಡಲು ಬೇಡ ಮೋಸ ನೋಡೆಚ್ಚರಿಕೆ ನಾಡೊಳು ಸುಜನರ ನೋಡಿ ನಡೆ ಕಂಡ್ಯ ನಟನೆ ಬೇಡೆಚ್ಚರಿಕೆ ||2|| ಚೆನ್ನಾಗಿ ಬದುಕಿದೆ ಗಳಿಸಿದೆ ನಾನೆಂಬ ಹೆಮ್ಮೆ ಬೇಡೆಚ್ಚರಿಕೆ ನಿನ್ನಾಯು ಮುಗಿಯಲು ಯಮದೂತರು ಬಂದು ಎಳೆಯುವರೆಚ್ಚರಿಕೆ ||3|| ಹೆಣ್ಣು ಹೊನ್ನು ಮಣ್ಣು ನಿನ್ನನಗಲಿ ಹೋಗುವರೆಚ್ಚರಿಕೆ ಮುನ್ನ ಮಾಡಿದ ಪುಣ್ಯ ಬೆನ್ನತ್ತಿ ಬರುವುದು ಮುಂದೆ ನೋಡೆಚ್ಚರಿಕೆ ||4|| ಒಬ್ಬರಂತೆಲ್ಲರ ನೋಡು, ಸತ್ಕರ್ಮದಿ ಉಬ್ಬ ಬೇಡೆಚ್ಚರಿಕೆ ಕಬ್ಬುಬಿಲ್ಲನ ಪಿತನ ಏಕಾಂತ ಭಾವದಿ ನೆರೆನಂಬು ಎಚ್ಚರಿಕೆ ||5|| ತಿಂದೋಡಿ ಬಂಧುಬಳಗ ತಪ್ಪಿಸಿಕೊಂಬರೆಂದು ನೋಡೆಚ್ಚರಿಕೆ ಎಂದೆಂದು ಅಗಲದ ಬಂಧು ಶ್ರೀಹರಿ ನಮಗೆಂದು ನೋಡೆಚ್ಚರಿಕೆ ||6|| ಕಾಲನ ದೂತರು ಯಾವಾಗ ಎಳೆವರೊ ಕಾಣದು ಎಚ್ಚರಿಕೆ ಬೇಲೂರು ಪುರವಾಸ ನೆಲೆಯಾದಿಕೇಶವನಾಳಾಗು ಎಚ್ಚರಿಕೆ ||7||

Thoughts & Reflections

0

No reflections shared yet. Be the first to share your thoughts!

Share your thought