Bhasaka
← Back to home

ಮಾವನ ಮನೆಯೊಳಗೆ ಇರಬಹುದೆ ಕೋವಿದರು

Author: ಕನಕದಾಸCategory: ಶ್ರೀಕೃಷ್ಣRaaga: ಕಾಂಬೋಧಿTaala: ರೂಪಕತಾಳ
ಮಾವನ ಮನೆಯೊಳಗೆ ಇರಬಹುದೆ ಕೋವಿದರು ಹಾವು ಹಿಡಿಯಲು ಬಹುದು ಹರಣ ನೀಡಲು ಬಹುದು ಬೇವ ಕಿಚ್ಚನು ಹಿಡಿದು ನುಂಗಬಹುದು ಭಾವೆಯಳ ತಂದೆ ಮನೆಯಲಿ ಜೀವಿಪುದಕಿಂತ ಸಾವುದೇ ಲೇಸು ಅಭಿಮಾನಿಗಳಿಗೆ ||1|| ಪರರ ಸೇರಲು ಬಹುದು ಪತಿತರಲ್ಲಿರಬಹುದು ಕೊರಳ ಘಾತಕಂಗೆ ಶಿರ ಒಪ್ಪಿಸಬಹುದು ತರುಣಿಯಳ ತೌರು ಮನೆಯಲಿ ಇರುವುದಕಿಂತ ತರುಗಿರಿ ಗುಹೆಯಲ್ಲಿ ಇದ್ದು ಜೀವಿಸಬಹುದು ||2|| ಮಾವ ಅತ್ತೆಯು ನೊಂದು ಅತ್ತಿಗೆಯು ತಾ ಜರಿದು ಹೇವವನಿಕ್ಕಿ ಚೂರ್ಣವ ಮಾಡಲು ಆವಾಗ ನೋಡಿದರು ಎನಗೆ ಹಿತರಿಲ್ಲೆಂದು ಮಾವ ಹೊರಗಾಡುವನು ಚಿಕ್ಕ ನುಡಿಗಳನು ||3|| ಬಂದೊಂದು ತಿಂಗಳೊಳು ಬಹುಮಾನ ನಡತೆಗಳು ಬಂದೆರಡು ತಿಂಗಳೊಳಗೆ ಹಿತವಾದವು ಒಂದೊಂದಭದ್ರ ನುಡಿ ಒಳಗೊಳಗೆ ಹುಟ್ಟುವುವು ಸಂದೇಹವೇಕೆ ಸಂಸಾರಿಗಳಿಗೆ ||4|| ಈ ಪರಿಯಲುಂಬಂಥ ಅಳಿಯ ಭೋಜನಕಿಂತ ಗೋಪಾಳ ಲೇಸು ಅಭಿಮಾನಿಗಳಿಗೆ ಶ್ರೀಪತಿ ನೆಲೆಯಾದಿಕೇಶವನ ಚರಣ ಸ- ಮೀಪದಲಿ ವಾಸಿಪುದೆ ವಾಸಿ ಮನವೆ ||5|| (* ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.)

Thoughts & Reflections

0

No reflections shared yet. Be the first to share your thoughts!

Share your thought