Bhasaka
← Back to home

ಮುಟ್ಟಬೇಡ ಮುಟ್ಟಬೇಡ ಮುರಹರನ

Author: ಕನಕದಾಸCategory: ಶ್ರೀಕೃಷ್ಣRaaga: ಧನ್ಯಾಸಿTaala: ಛಾಪುತಾಳ
ಮುಟ್ಟಬೇಡ ಮುಟ್ಟಬೇಡ ಮುರಹರನ ದಾಸರನು ||ಪ|| ಕಟ್ಟು ಮಾಡಿದ ಯಮನು ತನ್ನ ದೂತರಿಗೆ ||ಅ|| ತಿರುಮಣಿ ತಿರುಚೂರ್ಣ ಶೃಂಗಾರ ಧರಿಸುವರ ಸಿರಿತುಳಸಿ ವನಮಾಲೆಯಿಂದೊಪ್ಪುವವರ ತಿರುಮಂತ್ರ ತೀರ್ಥಪ್ರಸಾದಕೊಳಗಾದವರ ತಿರುಪತಿ ಯಾತ್ರೆಯನು ಮಾಡುವ ಮಹಾತ್ಮರ ||1|| ಬಡವರಾಗಲಿ ಭಾಗ್ಯವಂತರಾಗಲಿ ಅವರು ಕಡು ಕರ್ಮಿ ಘೋರಪಾತಕರಾಗಲಿ ನಡೆನುಡಿಗೆ ಮಾಧವನ ಬಿಡದೆ ಕೊಂಡಾಡುವರ ಗೊಡವೆ ಬೇಡೆಂದು ಯಮಧರ್ಮ ಸಾರಿದನು ||2|| ವಾಸುದೇವನ ವಾಸರವನಾಚರಿಸುವವರ ಬೇಸರಿಸದೆ ಹರಿಪ್ರಸಂಗ ಮಾಳ್ಪವರ ಶೇಷಶಯನ ಕಾಗಿನೆಲೆಯಾದಿಕೇಶವನ ದಾಸಾನುದಾಸರಿಗೆ ದಾಸರಾದವರ ||3||

Thoughts & Reflections

0

No reflections shared yet. Be the first to share your thoughts!

Share your thought