Bhasaka
← Back to home

ಯಾರಿಗಾರು ಬಹರು ಸಂಗಡ

Author: ಕನಕದಾಸCategory: ವೈರಾಗ್ಯRaaga: ಪಂತುವರಾಳಿTaala: ಛಾಪುತಾಳ
ಯಾರಿಗಾರು ಬಹರು ಸಂಗಡ- ಮುಂದೆ ಮೀರಿ ನಡೆದ ಸಂಚಿತ ಕರ್ಮವಂತೆ ಕಂತೆ ಮುಂಗಡ ||ಪ|| ಬರೆದ ಬರೆಹ ತೊಡೆದ ಮೇಲೆ ಕರೆದರಾಗ ಹೋಗಬೇಕು ನೆರೆದು ಸುತ್ತಮುತ್ತ ಕುಳಿತ ಪರಮ ಬಂಧುವರ್ಗವೆಲ್ಲ ಇರಿಸಬೇಡಿ ಸುಡುಸುಡೆಂಬರು ಸುಟ್ಟಬಳಿಕ ಭರದಿ ಬಂದು ಮನೆಯೊಳೆಂಬರು ಪಾಪಿ ಸತ್ತ ತರುಣಿ ಕೆಟ್ಟಳೆಂದುಕೊಂಬರು ಆತ್ಮ ||1|| ಸತಿಯು ಸುತರು ಪುತ್ರಿ ಮಿತ್ರರತಿಶಯದೊಳು ತಂದೆ ತಾಯಿ ಅತಿ ವಿನೋದಗೈವ ಭಾವ ಜತನವೆಂಬೊ ಅತ್ತೆ ಮಾವ ಜೊತೆಗೆ ಹುಟ್ಟಿದಣ್ಣ ತಮ್ಮ ಈ ದೇಹ ತಾನು ಸತ್ತ ಗಳಿಗೆ ಮುಟ್ಟಲಮ್ಮರು ಬರಿದೆ ನಾವು ವ್ಯಥೆಗೆ ಸಿಕ್ಕಿದೆವೆಂಬರು ಆತ್ಮ ||2|| ಕಟ್ಟಿದರ್ಧ ಕರೆವ ಎಮ್ಮೆ ಕೊಂಡುಕೊಂಡ ಸಾಲಕದನು ಪೋಟು ಮಾಡಿ ಮಕ್ಕಳೊಡನೆ ಅಷ್ಟು ಹೇಳಿ ಸಾವತನಕ ದುಷ್ಟ ಜನರು ಸುಮ್ಮನಿರುವರೆ ಕೈಯಲೊದಗಿ ದಷ್ಟು ಧರ್ಮವನ್ನು ಮರೆವರೆ ಆದಿಕೇಶವನ್ನ ಮುಟ್ಟಿ ಭಜಿಸಿ ಕಡೆಗೆ ಬಿಡುವರೆ ಆತ್ಮ ||3||

Thoughts & Reflections

0

No reflections shared yet. Be the first to share your thoughts!

Share your thought