Bhasaka
← Back to home

ವರಕವಿಗಳ ಮುಂದೆ ನರಕವಿಗಳ ವಿದ್ಯೆ ತೋರಬಾರದು

Author: ಕನಕದಾಸCategory: ಶ್ರೀಕೃಷ್ಣRaaga: ಸೌರಾಷ್ಟ್ರTaala: ಆಟತಾಳ
ವರಕವಿಗಳ ಮುಂದೆ ನರಕವಿಗಳ ವಿದ್ಯೆ ತೋರಬಾರದು- ಈ ಧರಣಿಯ ಕಲ್ಲಿಗೆ ಶರಣೆಂದು ಪೂಜೆಯ ಮಾಡಬಾರದು ||ಪ|| ಪಾಪಿಗಳಿದ್ದಲ್ಲಿ ರೂಪುಳ್ಳ ವಸ್ತುವ ತೋರಬಾರದು- ಬಹು ಕೋಪಿಗಳಿದ್ದಲ್ಲಿ ಅನುಭವಗೋಷ್ಠಿಯ ಮಾಡಬಾರದು ||1|| ಅಡಿ ಸತ್ತ ಮಡಕೆಗೆ ಜೋಡಿಸಿ ಒಲೆಗುಂಡು ಹೂಡಬಾರದು- ಬಹು ಬಡತನ ಬಂದಾಗ ನೆಂಟರ ಬಾಗಿಲ ಸೇರಬಾರದು ||2|| ಹರಿಯ ನಿಂದಿಸಿ ಹರ ಘನನೆಂದು ನರಕಕ್ಕೆ ಬೀಳಬಾರದು- ತಾ ಪರರನು ಬೈದು ಪಾತಕಕೆ ಮುನ್ನೊಳಗಾಗಬಾರದು ||3|| ಮಡದಿ ನುಡಿಯ ಕೇಳಿ ಜಗಳಕೊಬ್ಬರ ಕೂಡೆ ಹೋಗಬಾರದು- ಬಾ ಯ್ಬಡಿಕರು ಇದ್ದಲ್ಲಿ ವಸ್ತಿ ಬಿಡಾರವ ಮಾಡಬಾರದು ||4|| ಮುಂದೆ ಭಲಾ ಎಂದು ಹಿಂದೆ ನಿಂದಿಪರನ್ನು ಕೂಡಬಾರದು- ನಮ್ಮ ತಂದೆ ಬಾಡದಾದಿಕೇಶವನ ಸ್ಮರಣೆಯ ಬಿಡಬಾರದು ||5||

Thoughts & Reflections

0

No reflections shared yet. Be the first to share your thoughts!

Share your thought