Bhasaka
← Back to home

ವಾರಿಜ ಮುಖಿ ವಾರಿಜಾಕ್ಷಿ ವಾರಿಜ ಗಂಧಿ

Author: ಕನಕದಾಸCategory: ಶ್ರೀಕೃಷ್ಣRaaga: ಕೇದಾರಗೌಳ
ವಾರಿಜ ಮುಖಿ ವಾರಿಜಾಕ್ಷಿ ವಾರಿಜ ಗಂಧಿ ವಾರಿಸನಳಿಯನನು ಓರಂತೆ ನೀ ಪಓಗಿ ಕರೆತಾರೆನ್ನಯ ಪ್ರಾಣಾಧಾರ ಕೇಶವ ಮೂರ್ತಿಯ ||ಪ|| ನಗ ವೈರಿಯಣುಗನಣ್ಣನಯ್ಯನಾಪ್ತಗೆ ಮಿಗೆ ಹುಟ್ಟಿದನ ತಮ್ಮನ ಸೊಗಸು ವಸ್ತ್ರಕೆ ಸೋತನ ಸುರಪುತ್ರನ ವಾಜಿಯನಿವ ವೈರಿಯ ಪಗೆಯ ಜಗದೊಳಗೆ ಹಾಟದೊಳೇರಾಟದ ವನವ... ನವನಿಂದ ನಗೆತೋರಿ ನವು ನಿನಗೆ ಅಗಣಿತಾಭರಣವೀವೆನು ಅಂಗಜಾಗ್ನಿಯ ತಗಹ ಬಿಡಿಸೆ ತರುಣಿ ||1|| ಮಿಹಿರ ನಂದನನ ತಂದೆಯ ಪಗೆಯವನ ಮಾವನ ಹಿತದ ಮನೆವೆಸರ ಮಹಿ ವನ ಕೃತಿಗೊಡೆಯನ ಬಂಟನನುಜನ ಸಹಿಸಿ ತಮ್ಮನ ಮಿತ್ರನ ಕುಹಕದಿ ಶಾಪವಡೆದಳು ಪ್ರಸ್ತರವಾಗಿ ಗಗನ ಮಧ್ಯದೊಳಿರಲು ...ಸಿ ಶಾಪವ ದನುಜ... ಕ್ಷಿತಿಯೊಳು ವಿವರಿಸುವವನ ಕರೆತಾರೆ ||2|| ಸುರಭೇದ ಪ್ರಥಮ ದಾಸಿಯ ಪೆಸರನ ವಾಜಿಯರಸನ ನಖವೈರಿಯ ಮರೆಯ ಮಾರ್ಗದಿ ಗಮಿಸುವನಾಪ್ತನ ತಾಯ ಧರಿಸಿದಾತನ ಮಿತ್ರನ ಪೊರೆಯ ದೆಸೆಯ ದಿಕ್ಕರಿಯ ಕೋಪದಿ ಸೀಳ್ದನರಸಿಯಣ್ಣನನೀಕ್ಷಣ ಕರೆತಂದೆನಗೆ ಕೂಡಿಸು ಕಾಗಿನೆಲೆಯಾದಿಕೇಶವನ ||3||

Thoughts & Reflections

0

No reflections shared yet. Be the first to share your thoughts!

Share your thought