Bhasaka
← Back to home

ತಲ್ಲಣಿಸದಿರು ಕಂಡ್ಯ

Author: ಕನಕದಾಸCategory: ಶ್ರೀಕೃಷ್ಣRaaga: ಹಿಂದೋಳTaala: ಝಂಪೆತಾಳ
ತಲ್ಲಣಿಸದಿರು ಕಂಡ್ಯ ತಾಳು ಮನವೇ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ|| ಬೆಟ್ಟದ ತುದಿಯಲ್ಲಿ ಹುಟ್ಟಿರುವ ವೃಕ್ಷಕ್ಕೆ ಕಟ್ಟೆಯನು ಕಟ್ಟಿ ನೀರೆರೆದವರು ಯಾರೋ | ಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲು ಘಟ್ಯಾಗಿ ಸಲಹುವನು ಇದಕೆ ಸಂಶಯಬೇಡ || ಅಡವಿಯೊಳಗಾಡುವ ಮೃಗಪಕ್ಷಿಗಳಿಗೆಲ್ಲ ಅಡಿಗಡಿಗೆ ಆಹಾರವಿತ್ತವರು ಯಾರೋ | ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿ ಬಿಡದೆ ರಕ್ಷಿಪನಿದಕೆ ಸಂದೇಹ ಬೇಡ || ಕಲ್ಲೊಳಗೆ ಹುಟ್ಟಿರುವ ಕ್ರಿಮಿಕೀಟಗಳಿಗೆಲ್ಲ ಅಲ್ಲಲ್ಲಿ ಆಹಾರವಿತ್ತವರು ಯಾರೋ । ಫುಲ್ಲಲೋಚನ ಕಾಗಿನೆಲೆಯಾದಿಕೇಶವನು ಎಲ್ಲರನು ಸಲಹುವನು ಇದಕೆ ಸಂಶಯಬೇಡ ||

Thoughts & Reflections

0

No reflections shared yet. Be the first to share your thoughts!

Share your thought