Bhasaka
← Back to home

ಶರಣು ಶರಣುಶರಣು ದಶರಥ

Author: ಕನಕದಾಸCategory: ಶ್ರೀಕೃಷ್ಣ
ಶರಣು ಶರಣುಶರಣು ದಶರಥ ರಾಮದೂತಗೆ ಶರಣು ಕುರುಕುಲಾಧೀಶಗೆಶರಣು ವೈಷ್ಣವ ಮತ ವಿಲಾಸಗೆಶರಣು ಮುಖ್ಯಪ್ರಾಣಗೆ ವಾರಿಧಿಯನು ವೇಗದಿ ದಾಟಿ ವನವ ಕಿತ್ತಿದಾತಗೆಮೇರೆಯಿಲ್ಲದೆ ಅಸುರರ ಸಂಹರಿಸಿದ ರಣಶೂರಗೆವಾರಿಜಾಕ್ಷಿ ಸೀತಾದೇವಿಗೆ ವರದ ಮುದ್ರಿಕೆಯನಿತ್ತಗೆಧೀರತನದಲಿ ಅಕ್ಷಕುಮಾರನ ಪ್ರಾಣವನು ಕೊಂಡಗೆ ||1|| ರಾಜಸೂಯವ ರಚಿಸಬೇಕೆಂದು ರಾಜರ ಸೀಳಿದಾತಗೆರಾಜಮುಖಿಯಳ ರಕ್ಷಿಸಿ ಮೃಗರಾಜಗೆ ಒಲಿದಾತಗೆತ್ರಿಜಗವಂದಿತ ದೇವಗೆ ಸಜ್ಜನಪ್ರಿಯ ಎನಿಪಗೆರಾಜ ಧರ್ಮಗೆ ಅನುಜನಾದಗೆ ರಾಜಪೂಜಿತ ರಾಜಗೆ||2|| ಧಾರಿಣಿಯೊಳು ದುರ್ವಾದಿ ದೈತ್ಯರ ಗಂಟಲಗಾಣವಾದಗೆಮೂರೇಳು ಮತವನೆಲ್ಲ ಮುರಿದ ಧೀರ ಮಧ್ವರಾಯಗೆಸಾರ ತತ್ತ್ವಗಳನೆಲ್ಲ ಶೋಧಿಸಿ ಸೂರೆ ಮಾಡಿದಾತಗೆಊರ್ವಿಯೊಳು ವರ ದೇವತಾದಿಕೇಶವ ದೊರೆ ದಾಸಗೆ ||3||

Thoughts & Reflections

0

No reflections shared yet. Be the first to share your thoughts!

Share your thought