Bhasaka
← Back to home

ಶಿವ ಶಿವ ಶಿವ ಎನ್ನಿರೊ - ಮೂಜಗದವರೆಲ್ಲ

Category: ಶ್ರೀಶಿವ
ಶಿವ ಶಿವ ಶಿವ ಎನ್ನಿರೊ - ಮೂಜಗದವರೆಲ್ಲಶಿವ ಶಿವ ಶಿವ ಎನ್ನಿರೊ ಆಗಮ ಸಿದ್ಧಾಂತ ಮೂಲದ ಜಪವಿದು ಶಿವಶಿವಶಿವ ಎನ್ನಿರೋ - ನಿಮ್ಮರೋಗದ ಮೂಲವ ಕೆಡಿಪ ಔಷಧವಿದು ಶಿವಶಿವಶಿವ ಎನ್ನಿರೊ ||1|| ಮನುಜ ಜನ್ಮದಿ ಹುಟ್ಟಿ ಮೈಮರೆದಿರಬೇಡಿ ಶಿವಶಿವಶಿವ ಎನ್ನಿರೋ - ನಿಮ್ಮತನುಮನ ಪ್ರಾಣವ ವ್ಯರ್ಥವ ಮಾಡದೆ ಶಿವಶಿವಶಿವ ಎನ್ನಿರೊ ||2|| ಅಪರಾಧಕೋಟಿ ತ್ಯಜಿಸಬೇಕಾದರೆ ಶಿವಶಿವಶಿವ ಎನ್ನಿರೋ - ಮುಂದೆಉಪಮಿತರೋರ್ಮಿತರರಿಯದ ಜಪವಿದು ಶಿವಶಿವಶಿವ ಎನ್ನಿರೊ||3|| ಜವನ ಬಾಧೆಯ ನೀವು ಜಯಿಸಬೇಕಾದರೆ ಶಿವಶಿವಶಿವ ಎನ್ನಿರೋ - ನಿಜಸವಿಮಲ ಮುಕ್ತಿಯ ಪಡೆಯಬೇಕಾದರೆ ಶಿವಶಿವಶಿವ ಎನ್ನಿರೊ ||4|| ಭುವನಕೆ ಬಲ್ಲಿದರಾಗಬೇಕಾದರೆ ಶಿವಶಿವಶಿವ ಎನ್ನಿರೋ - ನೀವುಭವನ ಪದವಿಯನು ಪಡೆಯಬೇಕಾದರೆ ಶಿವಶಿವಶಿವ ಎನ್ನಿರೊ ||5|| ಗುರುಲಿಂಗ ಜಂಗಮವ ಅರಿಯಬೇಕಾದರೆ ಶಿವಶಿವಶಿವ ಎನ್ನಿರೋ - ಮುಂದೆಪರಮಾತ್ಮನ ನೀವು ತಿಳಿಯಬೇಕಾದರೆ ಶಿವಶಿವಶಿವ ಎನ್ನಿರೊ||6|| ಪೃಥ್ವಿಗೆ ಸದ್ಗುರು ಆಗಬೇಕಾದರೆ ಶಿವಶಿವಶಿವ ಎನ್ನಿರೋ - ನೀವುತತ್ತ್ವಪತಿ ಆದಿಕೇಶವನ ಕೂಡಬೇಕಾದರೆ ಶಿವಶಿವಶಿವ ಎನ್ನಿರೊ||7||

Thoughts & Reflections

0

No reflections shared yet. Be the first to share your thoughts!

Share your thought