Bhasaka
← Back to home

ಸಂಸಾರ ಸಾಗರವನುತ್ತರಿಸುವಡೆ

Author: ಕನಕದಾಸCategory: ಶ್ರೀಕೃಷ್ಣRaaga: ಮುಖಾರಿTaala: ಆಟತಾಳ
ಸಂಸಾರ ಸಾಗರವನುತ್ತರಿಸುವಡೆ ಕಂಸಾರಿ ನಾಮವೊಂದೇ ಸಾಕು ಮರುಳೆ ||ಪ|| ಯತಿಯಾಗಬೇಡ ನೀ ವೈರಾಗ್ಯವನೆ ಪಿಡಿದು ಸತತ ವ್ರತವ ಮಾಡುವೆನೆಂಬ ಹಮ್ಮು ಬೇಡ ಶೃತಿಸ್ಮೃತಿಯರಿತು ನಡೆವೆನೆಂಬ ಚೇಷ್ಟೆಯು ಬೇಡ ರತಿಪತಿಪಿತನ ನಾಮವೊಂದೆ ಸಾಕು ಮರುಳೆ ||1|| ತನುವ ದಂಡಿಸಿ ತುದಿಯ ಕೋಡುಗಲ್ಲಿನ ಮೇಲೆ ವನಿತೆಯನು ಬಿಟ್ಟು ತಪವಿರಲು ಬೇಡ ಅನುದಿನವು ನೀರೊಳಗೆ ಮುಳುಗಿ ನಡುಗಲು ಬೇಡ ವನಜನಾಭನ ನಾಮ ನೆನೆ ಕಂಡ್ಯ ಮರುಳೆ ||2|| ತೀರ್ಥಯಾತ್ರೆಯ ಮಾಡಿ ಬಹುವಿಧದಲಿ ಬಳಲಿ ಕೃ ತಾರ್ಥನಾದೆನೆಂಬುವ ಹೆಮ್ಮೆ ಬೇಡ ಪಾರ್ಥಸಾರಥಿ ಕಾಗಿನೆಲೆಯಾದಿಕೇಶವನ ಕೀರ್ತನೆಯ ಮಾಡಿ ಮುಕುತಿಯ ಹೊಂದು ಮರುಳೆ ||3|| (* ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.)

Thoughts & Reflections

0

No reflections shared yet. Be the first to share your thoughts!

Share your thought