Bhasaka
← Back to home

ಸತ್ಯವಂತರ ಸಂಗವಿರಲು ತೀರ್ಥವ್ಯಾತಕೆ

Author: ಕನಕದಾಸCategory: ಶ್ರೀಕೃಷ್ಣRaaga: ಪೂರ್ವೀTaala: ರೂಪಕತಾಳ
ಸತ್ಯವಂತರ ಸಂಗವಿರಲು ತೀರ್ಥವ್ಯಾತಕೆ ನಿತ್ಯ ಜ್ಞಾನಿಯಾದ ಮೇಲೆ ಚಿಂತೆಯಾತಕೆ ||ಪ|| ತಾನು ಉಣ್ಣದ ಪರರಿಗಿಕ್ಕದ ಧನವಿದ್ಯಾತಕೆ ಮಾನ ಹೀನನಾಗಿ ಬಾಳ್ವ ಮನುಜನ್ಯಾತಕೆ ಜ್ಞಾನವಿಲ್ಲದೆ ನೂರುಕಾಲ ಬದುಕಲ್ಯಾತಕೆ ಮಾನಿನಿಯ ತೊರೆದ ಮೇಲೆ ಭೋಗವ್ಯಾತಕೆ ||1|| ಮಾತು ಕೇಳದೆ ಮಲೆತು ನಡೆವ ಮಕ್ಕಳ್ಯಾತಕೆ ಪ್ರೀತಿಯಿಲ್ಲದೆ ಎಡೆಯಲಿಕ್ಕಿದ ಅನ್ನವ್ಯಾತಕೆ ನೀತಿಯರಿತು ನಡೆಯದಿರುವ ಬಂಟನ್ಯಾತಕೆ ಸೋತ ಹೆಣ್ಣಿಗೆ ಓತು ನಡೆಯದ ಪುರುಷನ್ಯಾತಕೆ ||2|| ಸನ್ನೆಯರಿತು ನಡೆಯದಿರುವ ಸತಿಯು ಯಾತಕೆ ಮನ್ನಣಿಂದೆ ನಡೆಸದಿರುವ ದೊರೆಯು ಯಾತಕೆ ಮುನ್ನ ಕೊಟ್ಟು ಪಡೆಯದಿನ್ನು ಬಯಸಲ್ಯಾತಕೆ ಚೆನ್ನ ಆದಿಕೇಶವನಲ್ಲದ ದೈವವ್ಯಾತಕೆ ||3||

Thoughts & Reflections

0

No reflections shared yet. Be the first to share your thoughts!

Share your thought