Bhasaka
← Back to home

ಹಣ್ಣು ಕೊಂಬುವ ಬನ್ನಿರಿ

Author: ಕನಕದಾಸCategory: ಶ್ರೀಕೃಷ್ಣRaaga: ಶಂಕರಾಭರಣTaala: ಆಟತಾಳ
ಹಣ್ಣು ಕೊಂಬುವ ಬನ್ನಿರಿ- ಹರಿದಾಸರು ಹಣ್ಣು ಕೊಂಬುವ ಬನ್ನಿರಿ ||ಪ|| ಚಿನ್ನ ಬಾಲಕೃಷ್ಣನೆಂಬ ಕನ್ನೆಗೊನೆ ಬಾಳೆಹಣ್ಣು ||ಅ|| ಸುತ್ತೇಳು ಲೋಕದಿ ಸುರರು ಬಿತ್ತಿದ ಹಣ್ಣು ಭಕ್ತರ ಬಾಯೊಳು ನೆನೆವ ಹಣ್ಣು ಅರ್ತಿಯುಳ್ಳವರೆಲ್ಲ ಕೊಳ್ಳಿ ಬೇಕಾದರೆ ನಿತ್ಯ ಮಾಧವನೆಂಬ ಅಚ್ಚ ಮಾವಿನ ಹಣ್ಣು ||1|| ಅಜನ ಪಡೆದ ಹಣ್ಣು ಗಜವ ಕಾಯ್ದ ಹಣ್ಣು ನಿಜಮುನಿಗಳಿಗೆ ತೋರಿಸಿದ ಹಣ್ಣು ತ್ರಿಜಗವಂದಿತ ಪಾಲ್ಗಡಲೊಡೆಯನ ಹಣ್ಣು ಸುಜನ ಭಕ್ತರೆಲ್ಲ ಕೊಳ್ಳ ಬನ್ನಿರಿ ಹಣ್ಣು ||2|| ತುರುವ ಕಾಯ್ದ ಹಣ್ಣು ಉರಗನ ತುಳಿದ ಹಣ್ಣು ಕರೆದರೆ ಕಂಬದೊಳು ಓಯೆಂಬ ಹಣ್ಣು ಮರುಗುವ ಧ್ರುವನಿಗೆ ಪಟ್ಟಗಟ್ಟಿದ ಹಣ್ಣು ಕರುಣಾಳು ಕಾಗಿನೆಲೆಯಾದಿಕೆಶವ ಹಣ್ಣು ||3||

Thoughts & Reflections

0

No reflections shared yet. Be the first to share your thoughts!

Share your thought