Bhasaka
← Back to home

ನಾವು ಕುರುಬರು, ನಮ್ಮ ದೇವರು ಬೀರಯ್ಯಕಾವ

Author: ಕನಕದಾಸCategory: ಶ್ರೀಕೃಷ್ಣRaaga: ಮುಖಾರಿTaala: ಝಂಪೆತಾಳ
ನಾವು ಕುರುಬರು, ನಮ್ಮ ದೇವರು ಬೀರಯ್ಯ ಕಾವ ನಮ್ಮಜ್ಜ ನರಕುರಿಯ ಹಿಂಡುಗಳ ಅಷ್ಟಮದ ಮತ್ಸರಗಳೆಂತೆಂಬ ಟಗರುಗಳು ದೃಷ್ಟಿ ಜೀವಾತ್ಮನೆಂತೆಂಬ ಆಡು ಸೃಷ್ಟಿ ಸಿದ್ಧ ಪ್ರಸಿದ್ಧವೆಂತೆಂಬ ಹೋತಗಳು ಕಟ್ಟಿ ಕೋಲಿನಲಿ ಇರಿಯುತಿಹ ನಮ್ಮಜ್ಜ ||1|| ವೇದಶಾಸ್ತ್ರ ಪುರಾಣವೆಂತೆಂಬ ಶ್ವಾನಗಳು ಕಾದಿದ್ದು ನಮ್ಮಜ್ಜನ ಹಿಂಡೊಳಗೆ ಹಾದಿಗಾಣದೆ ಕೂಗಿ ಬಾಯಾರಿ ಕಾಲ್ಗೆಡಲು ಆದರಿಸಿ ಅಂಬಲಿಯನೆರೆವ ನಮ್ಮಜ್ಜ ||2|| ಅರಿವೆಂಬ ಮರಿಗಳು ಹಿಂಡಿನೊಳಗಡೆ ಬರಲು ಮರೆವೆಂಬ ವ್ಯಾಘ್ರ ಕಿರುಬ ತೋಳಗಳು ಹೊಕ್ಕು ತರುಬಿ ಹಿಂಜಾವದಲಿ ಕುರಿಯ ಮುರಿವುದ ಕಂಡು ಅರಿತು ಅರಿಯದ ಹಾಗೆ ಇರುವ ನಮ್ಮಜ್ಜ ||3|| ಹುಟ್ಟುದಕೆ ಮೊದಲಿಲ್ಲ ಸಾವುದಕೆ ಕೊನೆಯಿಲ್ಲ ಹುಟ್ಟು ಸಾವಿನ ಹೊಲಬ ಬಲ್ಲ ನಮ್ಮಜ್ಜ ಅಷ್ಟು ಪ್ರಾಣಿಗಳಿಗೆ ಇಷ್ಟು ಅಂಬಲಿ ಮಾಡಿ ಹೊಟ್ಟೆ ತುಂಬುವ ಹಾಗೆ ಎರೆವ ನಮ್ಮಜ್ಜ ||4|| ಕಲಿಯುಗಕೆ ಗೌಡನಿವ ಸಂಗಾತಿ ಮಂತ್ರಿಸುತ ಕಲಿಯುಗಂಗಳನೆಲ್ಲ ಪೊರೆವಾತನೀತಜಲಜಾಕ್ಷ ಕಾಗಿನೆಲೆಯಾದಿಕೇಶವನ ಮನವೊಲಿಸಿ ಭಜಿಸದ ಮನುಜ ಹುಚ್ಚು ಕುರುಬ ||5||

Thoughts & Reflections

0

No reflections shared yet. Be the first to share your thoughts!

Share your thought