Bhasaka
← Back to home

ಹೂವ ತರುವರ ಮನೆಗೆ ಹುಲ್ಲ ತರುವೆ

Author: ಕನಕದಾಸCategory: ಶ್ರೀಕೃಷ್ಣRaaga: ಮುಖಾರಿTaala: ಝಂಪೆತಾಳ
ಹೂವ ತರುವರ ಮನೆಗೆ ಹುಲ್ಲ ತರುವೆ ||ಪ|| ಆವ ಪರಿಯಲಿ ಸಲಹೊ ದೇವ ಚಿನ್ಮಯನೆ ||ಅ|| ಈರೇಳು ಜನ್ಮದಿಂ ದಾಸನಾಗಿಹೆ ನಾನು ಸೇರಿದೆನೊ ತವ ಶರಣರ ಸೇವೆಗೆ ಘೋರ ದುರಿತಗಳೆಂಬ ವಾರಿಧಿಯ ಬತ್ತಿಸಿ ನಾರಸಿಂಹನೆ ಕಾಯೊ ನಮ್ಮ ಕುಲಸ್ವಾಮಿ ||1|| ರಂಗನಾಥನೆ ನಿನ್ನ ಡಿಂಗರಿಗನೋ ನಾನು ಡಂಗುರವ ಹೊಯಿಸಯ್ಯ ದಾಸನೆಂದು ಭಂಗಪಡಿಸದೆ ನಿನ್ನ ಶರಣರೊಳಗಿಂಬಿಟ್ಟು ಗಂಗೆ ಜನಕನೆ ಕಾಯೊ ಚರಣಕ್ಕೆ ಶರಣು ||2|| ಎಷ್ಟು ಮಾಡಲು ನಿನ್ನ ಬಂಟನೋ- ವೈಷ್ಣವರ ಹುಟ್ಟು ದಾಸಿಯ ಮಗನು ಪರದೇಶಿಯೋ ಸೃಷ್ಟಿಗೊಡೆಯ ಕಾಗಿನೆಲೆಯಾದಿಕೇಶವನೆ- ಕೈ ಬಿಟ್ಟೆಯಾದರೆ ನಿನಗೆ ಹರಿದಾಸರಾಣೆ ||3||

Thoughts & Reflections

0

No reflections shared yet. Be the first to share your thoughts!

Share your thought