Bhasaka
← Back to home

ಹೆತ್ತ ತಾಯಿಗಿಂತ ಅತ್ಯಧಿಕ ಮಾಯವುಂಟೆ

Author: ಕನಕದಾಸCategory: ಶ್ರೀಕೃಷ್ಣRaaga: ಮೋಹನTaala: ಆಟತಾಳ
ಹೆತ್ತ ತಾಯಿಗಿಂತ ಅತ್ಯಧಿಕ ಮಾಯವುಂಟೆ ಉತ್ತಮ ಅಶ್ವವ ಕತ್ತೆ ಹೋಲುವುದುಂಟೆ ||ಪ|| ವಿತ್ತವುಳ್ಳವನ ಕುಲ ಎಣಿಸುವುದುಂಟೆ ಸ್ವಾರ್ಥಕೆ ನ್ಯಾಯ ಎಂದಾದರೂ ಉಂಟೆ ||1|| ಅತ್ತೆಮನೆ ಸೇರುವಗೆ ಅಭಿಮಾನವುಂಟೆ ಬತ್ತಲೆ ತಿರುಗುವಗೆ ಭಯವು ಇನ್ನುಂಟೆ ||2|| ಪೃಥ್ವಿಯೊಳಗೆ ಕಾಗಿನೆಲೆಯಾದಿಕೇಶವಗೆ ಮರ್ತ್ಯದೊಳನ್ಯ ದೇವರು ಸರಿಯುಂಟೆ ||3||

Thoughts & Reflections

0

No reflections shared yet. Be the first to share your thoughts!

Share your thought