Bhasaka
← Back to home

ತಾಯಿ ದುರ್ಗೆಯ ನಿಜವನರಿಯುವ

Author: ವಚನವೇದCategory: ಶ್ರೀದೇವಿRaaga: ಮಿಯಾಮಲ್ಹಾರ್Taala: ತೇವರಾ
ತಾಯಿ ದುರ್ಗೆಯ ನಿಜವನರಿಯುವ ಧೀರರಾರೋ ಜಗದೊಳು | ಆರು ದರುಶನ ವೇದಶಾಸ್ತ್ರ ಪುರಾಣವರಿಯದು ಅವಳನು || ಯೋಗಿಹೃದಯದ ದಿವ್ಯನಿತ್ಯಾನಂದರೂಪಿಣಿ ಆಕೆಯು | ತನ್ನ ಆನಂದದಲಿ ತಾನೇ ಜೀವರೆದೆಯೊಳಗಿರುವಳು || ಸಕಲಬ್ರಹ್ಮಾಂಡವನು ಬಸಿರಲಿ ಧರಿಸಿ ನಿತ್ಯವು ಪೊರೆವಳು | ಮೂಲಾಧಾರ ಸಹಸ್ರಾರದಿ ಮುನಿಗಳವಳನು ನೆನೆವರು || ಶಿವನ ಹೊರಕತಿನ್ನಾರು ಅರಿಯರು ಅವಳ ದಿವ್ಯಸ್ವರೂಪವ | ಪದ್ಮವನದಲಿ ಹಂಸರೂಪನ ಜೊತೆಗೆ ನಲಿಯುವ ಮಾಟವ || ಕಡಲನೀಜುವೆನೆಂಬ ಮರುಳನ ಕಲ್ಪನೆಗೆ ನಗುವಂದದಿ | ಇಂಥ ತಾಯಿಯ ತಿಳಿದೆನೆಂದರೆ ಶ್ರೀಪ್ರಸಾದನು ನಗುವನು || ಕುಬ್ಜನಾದವ ಮುಗಿಲಚಂದ್ರನ ಹಿಡಿವ ಯತ್ನದ ತೆರದಲಿ | ಬುದ್ದಿಯರಿತರು ಹೃದಯವರಿಯದು ತಾಯಿ ದುರ್ಗೆಯ ನಿಜವನು ||

Thoughts & Reflections

0

No reflections shared yet. Be the first to share your thoughts!

Share your thought