Bhasaka
← Back to home

ಆನಂದಾ ಆನಂದಾ ಮತ್ತೆ

Author: ವಿಜಯದಾಸCategory: ಶ್ರೀಕೃಷ್ಣ
ಆನಂದಾ ಆನಂದಾ ಮತ್ತೆ ಪರಮಾನಂದಾ ಆನಂದನನಂದನೊಲಿಯೆ ಏನಂದದ್ದೆ ವೇದ ವೃಂದಾ 'ಅ'ಮೊದಲು 'ಕ'್ಷ ಕಾರಾಂತ ಈ ಮಹಾವರ್ಣಗಳೆಲ್ಲ ಸ್ವಾಮಿಯಾದ ವಿಷ್ಣುವಿನ ನಾಮವೆಂದು ತಿಳಿದವರಿಗೆ ||1|| ಪೋಪದು ಬರುತಿಪ್ಪುದು ಕೋಪಶಾಣಿ ಮಾಡುವುದು ರೂಪ ಲಾವಣ್ಯವು ಹರಿವ್ಯಾಪಾರವೆಂದವರಿಗೆ ||2|| ಜಲ ಕಾಷ್ಠ ಶೈಲ ಗಗನ ನೆಲ ಪಾವಕ ವಾಯು ತರು ಫಲಪುಷ್ಪ ಬಳ್ಳಿಲಿ ಹರಿ ಒಳಗೆ ವ್ಯಾಪ್ತನೆಂದವಗೆ ||3|| ತಾರೊ ಬಾರೊ ಬೀರೊ ಸಾರೊ ಮಾರೊ ಕೋರೊ ಹಾರೊ ಹೋರೊ ಸೇರೊ ಕೋರೊದೆಂಬ ದಿಶಾಪ್ರೇರಣೆ ಎಂದವರಿಗೆ ||4|| ಮಧ್ವಶಾಸ್ತ್ರ ಪ್ರವಚನ ಮುದ್ದುಕೃಷ್ಣನ ದರುಶನ ಸಿದ್ಧ ವಿಜಯವಿಠ್ಠಲನ ಪೊಂದಿ ಕೊಂಡಾಡುವವರಿಗೆ ||5|

Thoughts & Reflections

0

No reflections shared yet. Be the first to share your thoughts!

Share your thought