Bhasaka
← Back to home

ಆರೇನು ಮಾಡುವರು ಅವನಿಯೊಳಗೆ

Author: ವಿಜಯದಾಸCategory: ಶ್ರೀಕೃಷ್ಣ
ಆರೇನು ಮಾಡುವರು ಅವನಿಯೊಳಗೆ | ಪೂರ್ವಜನ್ಮದ ಕರ್ಮ ಫಣಿಯಲ್ಲಿ ಬರೆದುದಕೆ ಮಾಡಿದಡಿಗಿಯು ಕೆಡಲು ಮನಿಯ ಗಂಡನು ಬಿಡಲು | ಕೂಡಿದ ಸತಿ ತನ್ನ ಕುಣಿಸ್ಯಾಡಲು ನಿಜದಿ || ಗೋಡೆಗೆ ಬರೆದ ಹುಲಿ ಘಡಘಡನೆ ತಿನಬರಲು | ಆಡಿದ ಮತುಗಳು ಅಖಿಳಿರು ನಿಜವೆನಲು ||1|| ಹೊಲ ಬೇಲಿ ಮೆಯ್ದರೆ ಮೊಲ ಇರಿಯ ಬಂದರೆ | ತಲೆಗೆ ತನ್ನ ಕೈ ಪೆಟ್ಟು ತಾಕಿದರೆ || ಹೆರಳು ಹಾವಾದರೆ ಗೆಳೆಯ ರಿಪುವಾದರೆ | ಕಲಿಸಿದ ಅವಲಕ್ಕಿ ಕಲಪರಟಿ ನುಂಗಿದರೆ ||2|| ಹೆತ್ತ ತಾಯಿ ಹಿಡಿದು ಮಕ್ಕಳಿಗೆ ವಿಷ ಹಾಕಿದರೆ | ಪೆತ್ತ ತಂದೆಯು ಹೊರಗೆ ಮಾಡಿದರೆ || ತೊತ್ತು ಅರಸಿಗೆ ಪ್ರತ್ಯುತ್ತರವನಾಡಿದರೆ | ಕತ್ತಲೆ ಬೆನ್ನಟ್ಟಿ ಕರಡ್ಯಾಗಿ ಬಂದರೆ ||3|| ಕಣ್ಣವೊಳಗಿನ ಗೊಂಬಿ ಕಾದ ಬಂದರೆ | ಹೆಣ್ಣಿನ ಹರಟೆ ಹೆಚ್ಚಾದರೆ | ಅನ್ನವನು ಉಣ್ಣಲು ಅಜೀರ್ಣವಾದರೆ | ಪುಣ್ಯಕ್ಷೇತ್ರಗಳಲ್ಲಿ ಪಾಪ ಅಟ್ಟಿಸಿದರೆ ||4|| ಏರಿ ಕುಳಿತ ಕುಂಬಿ ಎರಡಾಗಿ ಮುರಿದರೆ | ವಾರಿಧಿಗಳು ಮೇರೆ ಮೀರಿದರೆ || ಆರಿದ ಇದ್ದಲಿಗಳು ಅಗ್ನಿಯಾದರೆ | ನಮ್ಮ ವಿಜಯವಿಠ್ಠಲನಿರುವ ತನಕ ||5||

Thoughts & Reflections

0

No reflections shared yet. Be the first to share your thoughts!

Share your thought