Bhasaka
← Back to home

ಇಂದಿರೆ ಇಂದೀವರಾಕ್ಷಿ

Author: ವಿಜಯದಾಸCategory: ಶ್ರೀಕೃಷ್ಣ
ಇಂದಿರೆ ಇಂದೀವರಾಕ್ಷಿ- ಸುಂದರಿ ಅರ- ವಿಂದ ಮಂದಿರೆ ಪೂರ್ಣೆ | ಇಂದುವದನೆ ಅಮರೇಂದ್ರ ವಂದಿತೆ | ಸಿಂಧುಸುತೆ ಆನಂದ ಫಲದೆ ಅಪ ರಾರರಮಣನ ಸೋಲಿಪ ನಖದಕಾಂತಿ | ಚಾರು ಚರಣತಳ ವಾರಿಜಾಂಕುಶ ಧ್ವಜ | ವಾರಣ ಕನಕ ಮಂಗಳರೇಖೆವೊಪ್ಪೆ | ನೂ- ಪುರ ಕಡಗ ಪೆಂಡ್ಯೆ ಪರಡೆ ಜಾನು ಜಂಘೆ | ಊರು ಕಟಿ ನಾಭಿ ಉದರ ತ್ರಿವಳಿ | ಧಾರ ಶೋಭನವಾದ ಹೊನ್ನುಡಿ | ಧಾರ ಕಿಂಕಿಣಿ ತೋರಮುತ್ತಿನ- ಹಾರ ಉರವಿಸ್ತಾರ ಗುಣವಂತೆ ||1|| ನ್ಯಾವಳಸರ ಕಂಠಮಾಲೆ ಪದಕ ಕಂಬು - ಗ್ರೀವ ಸರಿಗೆ ದಿವ್ಯಚಂದನ ಲೇಪಿಸಿ | ಪ್ರಾವಡ ಕಂಚುಕ ಹಸ್ತಕಡಗ ಮುದ್ರೆ ಪ್ರವಳಮಣಿಯು ಕೇಯೂರ ದಂಡೆಯ ಸರ | ಬೇವಿನೆಸಳಂತೆ ಪುಬ್ಬು ಢಾಳಿಪ | ತಾವರೆಯ ಫಣೆಯೂ ಸಂಪಿಗೆ | ಪುವ್ವ ಪೋಲುವ ನಾಸಿಕ ವೇಣಿ | ಹಾವಿನಂದದಿ ಒಪ್ಪುತಿರೆ ದೇವಿ ||2|| ವಾಲೆಮೂಗುತಿ ಹೊನ್ನಹೂವು ತೂಗುವ ತುಂಬು | ಫಾಲ ಕಸ್ತೂರಿನಾಮ ಕದಪು ಮುಂಗೂದಲು | ಮೇಲೆ ರ್ಯಾಕಟೆ ಚೌರಿ ಮುಡಿದ ಕುಸುಮವು | ಸಾಲು ಮುತ್ತಿನ ಜಾಳಿಗೆ ಗೊಂಡ್ಯ ಶಿರದಲ್ಲಿ | ಪಾಲ ಸಾಗರ ಶಾಯಿ ವಿಜಯವಿ- ಠ್ಠಲರೇಯನ ಉತ್ಸಾಹದಲಿ | ತೋಳಿನಲ್ಲಿ ಬಿಗಿದಪ್ಪಿ ಪವಳಿಪ | ಶ್ರೀ ಲಕುಮಿ ತ್ರೈಲೋಕ್ಯ ಮಾತೆ ||3||

Thoughts & Reflections

0

No reflections shared yet. Be the first to share your thoughts!

Share your thought