Bhasaka
← Back to home

ಇರಬಾರದೊ ಬಡವ ಜಗತ್ತಿನೊಳಗೆ

Author: ವಿಜಯದಾಸCategory: ಶ್ರೀಕೃಷ್ಣ
ಇರಬಾರದೊ ಬಡವ ಜಗತ್ತಿನೊಳಗೆ | ಪರದೇಶಿ ಮಾನವಗೆ ದಿಕ್ಕು ಮತ್ತಾವನು ಪೊಡವಿಪತಿ ದೃಷ್ಟಿಗಳು ಒಳ್ಳೆವಲ್ಲಾವೆಂದು | ಬಿಡದೆ ಜನ ಪೇಳುವುದು ಸಿದ್ಧವಯ್ಯಾ | ಬಡವ ನಾನಯ್ಯ ನಾನಾ ಕಷ್ಟಬಟ್ಟೆರಡು | ಒಡವೆ ಸಂಪಾದಿಸಲು ಅಪಹರಿಸಿದ ನೋಡು ||1|| ದಿನ ಪ್ರತಿ ದಿನದಲ್ಲಿ ಕರಳು ಕಟ್ಟಿಕೊಂಡು | ಹಣದಾಸಿಯಿಂದ ನಾ ಘಳಿಸಿದ್ದೆನೊ | ಮನೆವುಗೆ ಬಂದು ಮಾಡಿಕೊಂಡೊಯ್ದಿಯಾ ಧರ್ಮವೇ | ವನಜನಾಭನೆ ನಿನ್ನ ದೊರೆತನಕೆ ಶರಣೆಂಬೆ||2|| ದೊರೆಗಳಾ ಲಕ್ಷಣವಿದೆ ಎಂದೆಂದಿಗೆ ತಮಗೆ | ಸರಿಬಂದ ಕಾರ್ಯಮಾಡುವರಲ್ಲದೇ | ನೆರೆಯವರದೇ ತಪ್ಪೇ ವಿಜಯ ವಿಠ್ಠಲರೇಯ | ಮರಳೆ ಮಾತಾಡಿದರೆ ಅಪರಾಧ ಹೊರಿಸುವರು ||3||

Thoughts & Reflections

0

No reflections shared yet. Be the first to share your thoughts!

Share your thought