Bhasaka
← Back to home

ಈ ಕಾಯ ಬಲು ಹೇಯವೊ

Author: ವಿಜಯದಾಸCategory: ವೈರಾಗ್ಯ
ಈ ಕಾಯ ಬಲು ಹೇಯವೊ | ಸಾಕು ಸಾಕು ಸಂಸಾರ ನೆಚ್ಚದಿರು ಎಚ್ಚರಿಕೆ ಊಧ್ರ್ವಾಧೋ ಭಾಗದಿಂದ ಕೂಡಿದಾ ರಕ್ತಶುಕ್ಲ | ಅರ್ಧರ್ಧ ಪ್ರವೇಸಿಯಾಗಿ | ವರ್ಧನಾಗಿ ಮಾಂಸ ಪಿಂಡಿಕೆಯಲಿ ಬೆಳೆದು | ಅರ್ಧವದೊಳಗೆ ಬಳುಲುವುದೇನೊ ಮಹಾ ಕಠೀಣಾ ||1|| ಸನ್ನಿರೋಧವಾದ ಪ್ರಾದೇಶದಲಿ ನೀನು | ಬನ್ನ ಬಡುವದು ಜನಕೆ ಅರಿಯನಲ್ಲಾ | ಮುನ್ನೆ ಇಂದ್ರನಿಗಾಗಿ ವರವಿತ್ತ ಸಂಪತ್ತು | ಇನ್ನು ನಿನ್ನ ಸುತ್ತ ಬಂದದೆ ತಿಳಿದುಕೋ ||2|| ಕಫ ಶ್ಲೇಷ್ಮ ಪಿತ್ತ ವಾತ ಶೈತ್ಯಜ್ವರ ಕೆಮ್ಮು | ಸಪುತ ಧಾತುಗಳಿಂದ ಬರುವ ರೋಗ | ಅಪರಿಮಿತವಾದ ತನು ಕ್ಲೇಶ ಮೋಹಗಳೊಡನೆ | ತಪಿಸುವುದು ನೋಡು ಅನುಗಾಲ ಬಿಡದು ಮಾಯಾ ||3|| ಕಾಮ ಮದ ಗರ್ವದಲಿ ಪುಂಜನಾಗಿ ದುರಳ ನಿ | ಜ ಮಗಳ ಕೂಡ ಬೆರದಾಡಿ ಬೆರೆದು | ರೋಮರೋಮ ವಿಷಯ ಪೂರ್ತಿಯಾಗಿ ಚರಿಸಿ | ಪಾಮರನಾಗಿ ಬಳಲದಿರು ಬಹು ಜೋಕೆ ||4|| ಸತಿ ಸುತರು ಮಿಕ್ಕಾದ ಬಂಧುಗಳು ನೆರೆನೆರೆದು | ಪ್ರತಿದಿವಸದಲಿ ಅಟ್ಟುವುದು ನೋಡು| ಮತಿ ಚಂಚಲವಾಗಿ ಸತ್ಕರ್ಮ ವೃತ್ತಿಗೆ | ಪ್ರತಿಕೂಲವಾಗುವದು ಪ್ರೀತಿಯಾಗದು ಮುಂದೆ ||5|| ಎಂತು ನೋಡಲು ವಿಷಯ ಅನುಭವಿಸಿದರು ಅದರ | ಅಂತು ಕಂಡವರಾರು ವಲ್ಲೆನೆಂದು | ಭ್ರಾಂತಿಯಿಂದಲಿ ತಿರುಗಿ ಬಯಲಾಗೋದಲ್ಲದೆ | ಚಿಂತೆ ಇಷ್ಟಷ್ಟು ಏನೆಂದು ಪೇಳಲಿ ||6|| ಯಲೋ ಮನವೆ ಸಾರಿ ಪೇಳಿದೆನು ಚನ್ನಾಗಿ ನೀ | ನೆಲೆ ಮಾಡಿಕೋ e್ಞÁನ ಭಕುತಿ ವಿತ್ತಾ | ಸುಲಭ ದೇವರ ದೇವ ವಿಜಯವಿಠ್ಠಲರೇಯ | ಕೆಲಕಾಲ ನೆನೆದು ಸುಖಿಯಾಗು ಸುಜನರಾ ಕೇಳು ||7||

Thoughts & Reflections

0

No reflections shared yet. Be the first to share your thoughts!

Share your thought