Bhasaka
← Back to home

ಉಮಾ ಕಾತ್ಯಾಯನೀ ಗೌರಿ ದಾಕ್ಷಾಯಣಿ

Author: ವಿಜಯದಾಸCategory: ಶ್ರೀದೇವಿ
ಉಮಾ ಕಾತ್ಯಾಯನೀ ಗೌರಿ ದಾಕ್ಷಾಯಣಿ | ಹಿಮವಂತ ಗಿರಿಯ ಕುಮಾರಿ ರಮೆಯರಸನ ಪದಕಮಲ ಮಧುಪೆ ನಿತ್ಯ | ಅಮರವಂದಿತೆ ಗಜಗಮನೆ ಭವಾನಿ ಅ. ಪ ಪನ್ನಗಧರನ ರಾಣಿ ಪರಮಪಾವನಿ | ಪುಣ್ಯಫಲ ಪ್ರದಾಯಿನಿ || ಪನ್ನಗವೇಣಿ ಶರ್ವಾಣಿ ಕೋಕಿಲವಾಣಿ | ಉನ್ನತ ಗುಣಗಣ ಶ್ರೇಣಿ | ಎನ್ನ ಮನದ ಅಭಿಮಾನ ದೇವತೆಯೆ | ಸ್ವರ್ಣಗಿರಿ ಸಂಪನ್ನೆ ಭಾಗ್ಯ ನಿಧಿ || ನಿನ್ನ ಮಹಿಮೆಯನು ಬಿನ್ನಾಣದಲಿ ನಾ | ಬಣ್ಣಿಸಲಳವೆ ಪ್ರಸನ್ನ ವದನಳೆ ||1 || ಮುತ್ತಿನ ಪದಕ ಹಾರ ಮೋಹನ ಸರ | ಉತ್ತಮಾಂಗದಲಂಕಾರ || ಜೊತ್ಯಾಗಿ ಇಟ್ಟ ಪಂಜರದೋಲೆ ವಯ್ಯಾರ | ರತ್ನಕಂಕಣದುಂಗುರ || ತೆತ್ತೀಸ ಕೋಟಿ ದೇವತೆಗಳ್ ಪೊಗಳುತ | ಸತ್ತಿಗೆ ಚಾಮರವೆತ್ತಿ ಪಿಡಿಯುತಿರೆ || ಸುತ್ತಲು ಆಡುವ ನರ್ತನ ಸಂದಣಿ | ಎತ್ತ ನೋಡಿದರತ್ತ ಕಥ್ಥೈ ವಾದ್ಯ||2|| ಪೊಳವ ವಸನ ಕಂಚುಕ ತಿಲಕ | ಥಳಪಿ ಮೂಗುತಿ ನಾಸಿಕ || ಕಳಿತ ಮಲ್ಲಿಗೆ ಗಂಧಿಕ ಮುಡಿದ ಸೂಸುಕ | ಸಲೆ ಭುಜ ಕೀರ್ತಿಪಾಠಿಕ || ಇಳೆಯೊಳು ಮಧುರಾ ಪೊಳಲೊಳು ವಾಸಳೆ | ಅಳಿಗಿರಿ ವಿಜಯವಿಠ್ಠಲ ಕೊಂಡಾಡುವ || ಸುಲಭ ಜನರಿಗೆಲ್ಲ ಒಲಿದು ಮತಿಯನೀವ | ಗಳಿಕರ ಶೋಭಿತೆ ಪರಮಮಂಗಳ ಹೇ ||3||

Thoughts & Reflections

0

No reflections shared yet. Be the first to share your thoughts!

Share your thought