Bhasaka
← Back to home

ಎಚ್ಚರಿಕೆ ಎಚ್ಚರಿಕೆ ಎಲೋ ದೇವ

Author: ವಿಜಯದಾಸCategory: ಶ್ರೀಕೃಷ್ಣ
ಎಚ್ಚರಿಕೆ ಎಚ್ಚರಿಕೆ ಎಲೋ ದೇವ | ಎಚ್ಚರಿಕೆ ಎಚ್ಚರಿಕೆ | ಅಚ್ಚ ಕಲ್ಯಾಣ ಮೂರುತಿ ತಿರುವೆಂಗಳಾ ಅಜ ದ್ವಿಜಗಜ ಅಜಾಮಿಳ ಪರಿಪಾಲನೆಯಾ | ದ್ವಿಜ ರಾಜಾಂಗಾ ಗಂಗಜ ಭಕ್ತವರದನೆಯಾ | ಗಜ ಕುಜ ದನುಜ ಭೂ ಭುಜರ ಸಂಹಾರನೆಯಾ | ನಿಜ ಭಜಕರ ಪಂಕಜ ಹೃದಯಾರ್ಕನೆಯಾ||1|| ಪರತರ ಪರಮಾತ್ಮ ಪರಮೇಷ್ಠಿ ವಂದನೆಯಾ | ಕರುಣ ಶರಧಿ ತಾರಾ ಕರುಗಳ ಕಾಯಿದನೇಯಾ | ಎರಡೇಳು ಲೋಕ ಪೊರೆವಾ ಭಾರಣ ಹರಿಯಾ | ಶರಣು ಹೊಕ್ಕೆನು ಎನ್ನ ಮೊರೆ ವಿಚಾರಿಸೊಯಾ ||2|| ಜಯ ಜಯಾ ಚಿತ್ತಾವಾಧಾರು ಪರಾಕ್ರಮಯಾ | ಭಯ ನಿವಾರಣ ನಿಜ ಭಂಟರಿಗೆ ಬಂಟಯಾ | ನಯ ಮೂರುತಿ ನಮ್ಮ ವಿಜಯವಿಠ್ಠಲರೇಯಾ ಯಾ | ತ್ರಿಯಗುಣ ವಿರಹಿತ ಶೇಷಗಿರಿವಾಸಯಾ ||3||

Thoughts & Reflections

0

No reflections shared yet. Be the first to share your thoughts!

Share your thought