Bhasaka
← Back to home

ಎಲ್ಲಿದ್ದರೇನು ಶ್ರೀ ಹರಿಗಲ್ಲದವನು

Author: ವಿಜಯದಾಸCategory: ಶ್ರೀಕೃಷ್ಣ
ಎಲ್ಲಿದ್ದರೇನು ಶ್ರೀ ಹರಿಗಲ್ಲದವನು ನಿಲ್ಲದೆ ಜಪಿಸಿದರೆ ಸಲ್ಲುವನೆ ಸದ್ಗತಿಗೆ ಕಪ್ಪೆ ಕಮಲದ ಬಳಿಯೆ ತಪ್ಪದೆ ಅನುಗಾಲ | ಇಪ್ಪುದೈ ಒಂದು ಅರೆ ಘಳಿಗೆ ಬಿಡದೆ || ಬಪ್ಪದಿಂದಲಿ ಅದರ ಪರಿಮಳದ ಸೊಬಗ ನೀ- | ಕಪ್ಪೆ ವಾಸನೆಗೊಂಡು ಹರುಷಪಡಬಲ್ಲುದೆ ||1|| ಹಾಲುಕೆಚ್ಚಲು ಬಳಿಯೆ ತೊಣಸಿ ಹತ್ತಿಕೊಂಡು | ಕಾಲವನು ಕಳೆವ ಬಗೆ ಬಲ್ಲಿರೆಲ್ಲ || ವೇಳೆವೇಳೆಗೆ ಹಸುವ ಕರೆದುಂಬ ನರನಂತೆ | ಕೀಳು ತೊಣಸಿಯು ಉಂಡು ಹರುಷಪಡಬಲ್ಲ್ಲುದೆ||2|| ತುಳಸಿ ಸಾನ್ನಿಧ್ಯದಲಿ ನೀರುಳ್ಳಿಯನು ಹಾಕಿ | ಹೊಲಸು ಹೋಗ್ವುದೆ ಹಲವು ಕಾಲಿದ್ದರೆ || ತಿಳಿವಳಿಕೆ ಇಲ್ಲದವ ಸಿರಿ ವಿಜಯವಿಠ್ಠಲನ ಬಳಿಯಲಿದ್ದರೇನು ದೂರಿದ್ದರೇನು ||3||

Thoughts & Reflections

0

No reflections shared yet. Be the first to share your thoughts!

Share your thought