Bhasaka
← Back to home

ಏಕಾಂತದಲಿ ಬಂದು ಮಾತು ನುಡಿದೆ

Author: ವಿಜಯದಾಸCategory: ಶ್ರೀಕೃಷ್ಣ
ಏಕಾಂತದಲಿ ಬಂದು ಮಾತು ನುಡಿದೆ ಶ್ರೀ | ಕಾಂತ ನಿನಗಿದು ಸುಲಭವಾಗಿದೆ ನೋಡು ಪರಧನವನಪಹರಿಸಿಕೊಂಡು ಬೆಳೆದು ಇದ್ದ | ವರ ಮನೆಯೊಳಗಡಲೇತಕೆ | ನಿರುತ ಎನ್ನ | ಹೃದಯವೆಂಬೊ ಗಾಡಾಂಧಕಾರ | ಭರಿತವಾಗಿದೆ ಇಲ್ಲಿ ಅಡಗಬಾರದೆ ಬಂದು ||1|| ಕೇವಲ ಹಕ್ಕಲದ ವನದೊಳು ಪೊಕ್ಕು ಬೇಟೆ | ದೇವ ಆಡುವರೆ ನೀ ಹುಡಿಕಿ ಹುಡಿಕಿ| ಕಾವಲಾರಣ್ಯ ಇಲ್ಲಿ ವಿಂಡೂ ತುಂಬಿದೆ | ಸಾವಧಾನದಿ ಬೇಟೆ ಆಡಬಾರದೆ ಬಂದು ||2|| ವೈಕುಂಠ ಮೂರು ಸ್ಥಾನದಲಿ ಮುಕ್ತರಿಗೆ | ಬೇಕಾದದೀಯಾಬೇಕು ಕಡಿಮೆ ಇಲ್ಲಾ | ನೀ ಕೇಳು ಎನ್ನಲ್ಲಿ ಸರಿ ಬಂದಂತೆಯಲ್ಲದೆ | ವಾಕು ಪೇಳುವೆ ನಿಲ್ಲು ವಿಜಯವಿಠ್ಠಲ ಬಂದು||3||

Thoughts & Reflections

0

No reflections shared yet. Be the first to share your thoughts!

Share your thought