Bhasaka
← Back to home

ಒಂದೇ ನಾಮದಲಡಗಿದವೊ ಅಡಗಿದವೋ

Author: ವಿಜಯದಾಸCategory: ಶ್ರೀಕೃಷ್ಣ
ಒಂದೇ ನಾಮದಲಡಗಿದವೊ ಅಡಗಿದವೋ ನಂದದಿಂದುಸುರುವ ಅಖಿಳ ವೇದಗಳು ಒಂದೇ ನಾಮವೆ ಪ್ರಹಲ್ಲಾದನ್ನ ರಕ್ಷಿಸಿತು ಒಂದೇ ನಾಮವೆ ಅಜಾಮಿಳಗೆ ವೊಲಿದಿತು ತಂದೆ ತಾಯ ಬಿಟ್ಟ ಕಂದ ಧ್ರುವರಾಯಗೆ ಆ ನಂದ ಪದವಿಯಿತ್ತ ಅದ್ಭುತ ಮಹಿಮೆಯು ||1|| ಮಚ್ಛಾದ್ಯನಂತಾವತಾರಾ ಸ್ವಚ್ಛ ಅಷ್ಟಾದಶ ಪುರಾಣ ಅಮೃತದ ಸಾರಾ ಕಚ್ಛಪ ತ್ರಿಜಗಕೆ ಆಧಾರ ತನ್ನ ಸ್ವೇಚ್ಛೆಯಿಂದಲಿ ತಾ ಮಾಡೋ ವ್ಯಾಪಾರಾ ||2|| ಒಬ್ಬರಿಂದಲಿ ತನಗಿಲ್ಲ ತಾ ನೊಬ್ಬನೆ ಜೀವರ ರಕ್ಷಿಪನೆಲ್ಲಾ ಕಬ್ಬುಬಿಲ್ಲಿನ ಪಿತ ವಿಜಯವಿಠ್ಠಲರೇಯ- ವೈ ದರ್ಭೆಯ ರಮಣನ ಸುಗುಣಗಳೆಲ್ಲಾ ||3||

Thoughts & Reflections

0

No reflections shared yet. Be the first to share your thoughts!

Share your thought