Bhasaka
← Back to home

ಕಮಲಸಂಭವ ನಾಸಿಕ ಸಂಭವ ಕಾಯೊ

Author: ವಿಜಯದಾಸCategory: ಶ್ರೀಕೃಷ್ಣ
ಕಮಲಸಂಭವ ನಾಸಿಕ | ಸಂಭವ ಕಾಯೊ ನಮಿಸುವೆ ನಿನಗೆ ನಾನು ಅಂದು ಧರಣಿ ಜಲ ವಂದಾಗಿ ಕರಗಿರೇ | ನಂದನ ಚಿಂತಿಸಿ ಬಂದ ವರಹಮೂರ್ತಿ ||1|| ಮಧು ಪಾನಾವವ ಸಾ | ದದು ಅವನ ಚರ್ಮ | ಹೊದಿಸಿ ಹೆಪ್ಪುಗೊಟ್ಟು ಮೇದಿನೆಂದಿಸಿದೆ ||2|| ಕನಕಲೋಚನ ಭೂಮಿಯನು ಕದ್ದು ಮೈಯಲು | ಅನಿಮಿಷರೊಲಿಸೆ ಅವನ ಕೊಂದುದ್ಧರಿಸಿದೆ||3|| ಕರುಣಾಕಟಾಕ್ಷದಿ ಹೊರವಲ್ಲಿ ನಾನೆಲ್ಲಿ | ಸರಿಗಾಣೆ ನಿನಗೆ ಅಂತರ ಬಹಿರದೊಳು ||4|| ರಜೋಭಿಮಾನಿಯ ವಡಿಯಾ ಸುಜನಪಾಲಾ | ಭುಜಗ ಗಿರಿಯ ವಾಸಾ ವಿಜಯವಿಠ್ಠಲಾಧೀಶಾ ||5||

Thoughts & Reflections

0

No reflections shared yet. Be the first to share your thoughts!

Share your thought