Bhasaka
← Back to home

ಕೃಷ್ಣವೇಣಿ ಕಲ್ಯಾಣಿ

Author: ವಿಜಯದಾಸCategory: ಶ್ರೀದೇವಿ
ಕೃಷ್ಣವೇಣಿ ಕಲ್ಯಾಣಿ ಕಷ್ಟ ಪರಿಹರಿಪೆ ನಿತ್ಯ ಸಾಗರನ ರಾಣಿ ಅಜನ ನಿರೂಪದಲಿ ಜಾಬಾಲಿಮುನಿ ಬಂದು ಭಜಿಸಿದನು ನಿನ್ನ ಬಲುದಿವಸಂಗಳು ನಿಜವಾಗಿ ಹರನ ಜಡೆಯಲ್ಲಿ ಉದ್ಭವಿಸಿದೆ ತ್ರಿಜಗದೊಳಗೆ ಮೆರೆದೆ ತ್ರಿದಶಾಮರವಂದಿತೆ ||1|| ಕನ್ಯಾರಾಶಿಗೆ ಜೀವ ಬಂದು ಪ್ರಾಪುತನಾಗೆ ಹನ್ನೆರಡು ವರುಷಕೆ ಒಮ್ಮೆ ಬಿಡದೇ ಮನ್ನಿಸಿ ಭಕುತಿಯಿಂದ ಒಂದು ಮಜ್ಜನಮಾಡೆ ಧನ್ಯನ ಮಾಳ್ಪೆ ಬಲು ಘನ್ನ ತರಂಗಿಣಿ ||2|| ಎತ್ತ ನೋಡಿದರತ್ತ ನಾಲ್ಕುವರೆ ಯೋಜನವು ಕ್ಷೇತ್ರ ಪುಣ್ಯದೇವಿಯೆನಿಸಿಕೊಂಬೆ ಸ್ತುತಿಸಲಳವೇ ನಿನ್ನ ಮಹಿಮೆಯ ಅನುಗಾಲ ಮತ್ತಗಜಗಮನೆ ಮಲದೂರೆ ಮುಕ್ತಿಧಾರೆ ||3|| ಪೋಗದ ಪಾಪಗಳಿರಲು ನಿನ್ನ ದರುಶನವು ಆಗುತ್ತ ಓಡಿದವು ನೆಲೆಗಾಣದೆ ಬಾಗಿ ನಮೋ ನಮೋಯೆಂಬ ಭಾಗವತರ ಮನೆಯ ಬಾಗಿಲ ಕಾಯ್ವ ಭಾಗ್ಯವ ಕೊಡು ಕರುಣದಲಿ ||4|| ಕಲಿಯುಗಕೆ ನೀನೇ ವೆಗ್ಗಳವೆಂದು ಬುಧಜನರು ಒಲಿದು ಕೊಂಡಾಡುವರು ಸತತದಲ್ಲಿ ಜಲನಿಧಿಯ ಎರಡು ಮೊಗದಲಿ ಮೆರೆದೆ ಮಹತಟಿನಿನೆಲೆಗೊಳಿಸು ವಿಜಯವಿಠ್ಠಲ ಚರಣದಲ್ಲಿ ||5||

Thoughts & Reflections

0

No reflections shared yet. Be the first to share your thoughts!

Share your thought