Bhasaka
← Back to home

ಗುರು ಪುರಂದರ ದಾಸರೇ

Author: ವಿಜಯದಾಸCategory: ಇತರೆ
ಗುರು ಪುರಂದರ ದಾಸರೇ ನಿಮ್ಮ ಚರಣ ಸರಸಿಜ ನಂಬಿದೆ ಗುರುವ ರಹಿತರ ಮಾಡಿ ನಮ್ಮನು ಪೊರೆವ ಭಾರವು ನಿಮ್ಮದೆ ಒಂದು ಅರಿಯದ ಮಂದಮತಿ ನಾನಿಂದು ನಿಮ್ಮನು ವಂದಿಪೆ ಇಂದಿರೇಶನ ತಂದು ತೋರಿಸಿ ತಂದೆ ಮಾಡೆಲೊ ಸತ್ಕೃಪೆ ||1|| ಪುರಂದರ ಗಡದೊಳಗೆ ನಿಂದು ನಿರುತ ದ್ರವ್ಯವ ಗಳಿಸಿದೆ ಪರಮ ಪುರುಷನು ವಿಪ್ರನಂದದಿ ಕರವ ನೀಡಿ ಯಾಚಿಸೆ ||2|| ಪರಮ ನಿರ್ಗುಣ ಮನವರಿತು ಹರಿಗೆ ಸೂರೆಯ ನೀಡುತ ಅರಿತು ಮನದೊಳು ಹರಿದು ಭವಗಳ ತರುಣಿ ಸಹಿತಾ ಹೊರಟನೆ ||3|| ಮಾರಜನಕನ ಸನ್ನಿಧಾನದಿ ಸಾರಗಾನವ ಮಾಡುವ ನಾರದರೆ ಈ ರೂಪದಿಂದಲಿ ಚಾರುದರುಶನ ತೋರಿದ ||4|| ಅಜಭವಾದಿಗಳರಸನಾದ ವಿಜಯವಿಠ್ಠಲನ ಧ್ಯಾನಿಪ ನಿಜ ಸುಜ್ಞಾನವ ಕೊಡಿಸಬೇಕೆಂದು ಭಜಿಪೆನೋ ಕೇಳ್ ಗುರುವರ ||5||

Thoughts & Reflections

0

No reflections shared yet. Be the first to share your thoughts!

Share your thought