Bhasaka
← Back to home

ಗುರು ವಾದಿರಾಜ ಯತಿಯಾ

Author: ವಿಜಯದಾಸCategory: ಇತರೆ
ಗುರು ವಾದಿರಾಜ ಯತಿಯಾ ನೆನಸುವದು ನಿರುತ ಕರುಣಿಪ ಮತಿಯಾ ಆರ್ತನಾ ಸರಿದಾರು ನವನ ವರ್ತಮಾನವನೆ ಕೇಳಿ ಕರ್ತೃತ್ವ ಪರಿಹರಿಸಿ ಸಂಸೃತಿಯ ಗರ್ತದಿಂದೆತ್ತಿ ನೋಳ್ಪ ||1|| ದುರಿತ ರಾಶಿಗಳ ಶೀಳಿ ಹೊರದೆಗೆದು ಮರುತ ಶಾಸ್ತ್ರವನೆ ಪೇಳಿ ಪರಮಾರ್ಥ ಮಾರ್ಗವಾ ತೋರಿ ಸುಖಬಡಿಸಿ ಧರಿಯೊಳಗೆ ಮೆರೆದೆ ಧೀರ ||2|| ವಂದಿಸಿ ಸೌಂದರ್ಯಪುರಿಯ ವಾಸ ವರಪ್ರದ ನಂದ ಸತ್ಕೀರ್ತಿ ಭೂಪ ವಂದಿಸಿದವರಿಗೆ ಲೇಸಾಗಿ ಕೊಡುವ ಮು ಕುಂದನಂಘ್ರಿಯ ದಾಸ ||3|| ತೀರ್ಥಯಾತ್ರೆಯನೆ ಮಾಡಿ ಹರಿ ಭೇದಾರ್ಥದಿಂದಲೆ ಕೊಂಡಾಡಿ ಅರ್ಥಾಸೆಗಳ ಈಡಾಡಿ ಹಯಮೊಗನ ಅರ್ಥಿಯಿಂದಲಿ ಪೂಜಿಪ||4|| ತ್ರಿಜಗದೊಳಗಿನವರಿಗೆ ಎಣೆಗಾಣೆ ಕುಜನ ಮತ ಸೋಲಿಸುವಲ್ಲಿ ವಿಜಯವಿಠ್ಠಲನೆ ದೈವವೆಂದು ಧ್ವಜವೆತ್ತಿ ತಿರುಗಿದ ಮುನಿಪ ||5||

Thoughts & Reflections

0

No reflections shared yet. Be the first to share your thoughts!

Share your thought