Bhasaka
← Back to home

ಗೋತ್ರ ಪ್ರವರ ಉಚ್ಚಾರಣೆ

Author: ವಿಜಯದಾಸCategory: ಶ್ರೀಕೃಷ್ಣ
ಗೋತ್ರ ಪ್ರವರ ಉಚ್ಚಾರಣೆ ವಂದೇ ಕಾಣೊ ಧಾತ್ರಿಯೊಳಗೆ ತಂದೆ ಮಕ್ಕಳು ಮಾಡುವ ಕಾ | ಲತ್ರಯದ ಸಂಧ್ಯಾವೆಲ್ಲ ಎಂದಿಗೂ ಭೇದವಿಲ್ಲಾ ಪುತ್ರನಿಗೆ ಪಿತನು ಆನಾರಂಭದಿ ನಾಮ ಮಾತ್ರ ನುಡಿಸುವ ಬುದ್ಧಿ ಪೇಳಿ | ಚಿತ್ರವ ಗೋಡೆಯ ಮೇಲೆ ರಚಿಸಿರಲು ನೋಡಿ ಸ್ತೋತ್ರ ಮಾಡಿದರೆ ಯೇನಾಹದೋ||1|| ಚಿತ್ರಿಕ ಬಲು ವಿವೇಕ ಉಳ್ಳವನೆಂದು ಪಾತ್ರರ ಮುಂದೆ ಕೊಂಡಾಡಿದಂತೆ | ಧಾತ್ರಿಯೊಳಗೆ ನಮ್ಮ ಪುರಂದರದಾಸರ ಸ್ತೋತ್ರ ಮಾಡಿರಯ್ಯ ಸಚಲರಾಗೀ ||2|| ಗಾತ್ರ ನಿರ್ಮಲವಕ್ಕು ಯೆಂದೆಂದಿಗೆ ದಿವ್ಯ | ನೇತ್ರದಿಂದಲಿ ಹರಿಯ ಸರಿದರುಶನಾ | ರಾತ್ರಿಂಚರೆಯೆಂದು ಪೆಸರುಳ್ಳವು ಕುಮುದ ಮಿತ್ರಗೆ ಸರಿಯೇನು ಉಳದಾದವು ||3|| ಸ್ತೋತ್ರಾಭರಣವಾದ ದಾಸರ ಶವನಕ್ಕೆ ಅ ನ್ಯತ್ರ ನುಡಿವದು ಧಿಕ್ಕರಿಪದು | ನಿತ್ರಾಣವಾದ ಮನುಜ ಹಿರಿಯರ ವಿತ್ತದಿಂದ ಯಾತ್ರಿ ಮಾಡಿ ಪುಣ್ಯ ಘಳಿಸಿದಂತೆ ||4|| ಸ್ತೋತ್ರ ಮಿಟಮ್ಯಾಲೆ ಪಂಗ್ತಿ ಹಾಕಿ ಕೊಡಲು ಮಾತ್ರೆಗಳ ನೋಡಿ ಬರದಂತೆ ವೋ | ಶತ್ರು ಸಂಹಾರ ನಮ್ಮ ವಿಜಯವಿಠ್ಠಲನಂಘ್ರಿ ಶತ ಪತ್ರ ಬಲ್ಲವರಿಗೆ ಯಿದೆ ವಿಸ್ತಾರ ನಿರ್ಮಾಣ ||5||

Thoughts & Reflections

0

No reflections shared yet. Be the first to share your thoughts!

Share your thought