Bhasaka
← Back to home

ಜನಿಸಲಾರೆನು ಜಗದೊಳಗೆ ಹರಿಯೆ

Author: ವಿಜಯದಾಸCategory: ಶ್ರೀಕೃಷ್ಣ
ಜನಿಸಲಾರೆನು ಜಗದೊಳಗೆ ಹರಿಯೆ ಕನಸಿನೊಳು ನೆನೆಯೆ ಕಂಪನವಾಗುತಿದೆ ಮನಕೆ ವಾರಿಮಂಡಲ ವೃಷ್ಟಿಧಾರೆ ಧಾರುಣಿ ಜನಕ ದ್ವಾರದಿಂ ಸರಿದುಪೋಗಿ-ಸಾಗಿ ಜಾರಿ ಜನನೀ ಜಠರ ನಾರುವ ದುರ್ಗಂಧ ಸೇರಿ ಬೊಬ್ಬುಳಿಯ ತೆರದಿ-ಭರದಿ ವಾರಿವಾರಕೆ ಬೆಳೆದು ತಾರಿತಗಲಿ ಬಳಲಿ ಶರೀರವನ್ನೆ ಪೊತ್ತು-ತೆತ್ತು ಖಾರ ಕಟು ಲವಣಾದಿ ಘೋರತರ ಮಹಕ್ಲೇಶ ವಾರಿಧಿಯೊಳಗೆ ಮುಳುಗಿ ಮರುಗಿ ಸೊರಗಿ ||1|| ಲೇಶಾವಕಾಶವಿಲ್ಲದ ದೇಶದೊಳು ಸನ್ನಿ ವಾಸ ಉಲ್ಬಣದೊಳಿದ್ದು-ಕುದ್ದು ಘಾಸಿಯಲ್ಲಿ ಪರಿತಾಪ ಸೂಸಲು ಹಾಹಾಯೆಂಬ ಘೋಷಧ್ವನಿಯಿಂದ ಬೆದರಿ-ಅದರಿ ರೋಷವಾಗಿದ್ದ ಕ್ರಿಮಿರಾಶಿ ಮುಖ ಕಾಟದಿಂ ಏಸು ಬಗೆಯಿಂದ ನೊಂದು ಬೆಂದು ಶ್ವಾಸ ಬಿಡುವುದಕೆ ವ್ಯತ್ಯಾಸವಾಹುದು ಮುಂದೆ ಮೋಸಗೊಂಡು ಮತಿಗೆಟ್ಟು ಬೇಸರಿಕೆ ಅಕಟಕಟ ||2|| ಜಾನು ಮಧ್ಯದಲಿ ಶಿರಗೋಣು ತೂರಿಸಿಕೊಂಡು ಮಾಣದಲೆ ಬಿಕ್ಕಿ ಬಿಕ್ಕಿ-ಸಿಕ್ಕಿ ಏನೆಂಬೆ ಮಸೆದುಕ್ಕಿನ ಬಾಣ ಪೆಟ್ಟಿನ ಸಮ- ಬೇನೆಯಿಂದಧಿಕವಾಗೆ ಮೈಗೆ ಮೇಣು ಕೈಕಾಲುಗಳು ಕಾಣಿಕಾ ಕಾಲವಗ- ಲಾನು ಚರಿಸದಾದೆನೊ ಇನ್ನೇನೊ ಗಾಣ ತಿರುಗಿದಂತೆ ಗೇಣು ಬೈಲೊಳಗೆ ಈ ಆ-ನನ ಮೇಲಡಿಯಾಗಿ ಬಂದೆ-ನೊಂದೆ ||3|| ಸೂತಿಕಾಮರುತ ಬೀಸಿದಾತುರಕೆ ಬೆಸಸುವ ಯಾತನೆಗೆ ಕಾಣೆ ಲೆಖ್ಖ-ದು:ಖ ಗಾತುರವು ಕಿರಿದಾಗಿ ಪೋತಭಾವವ ವಹಿಸೆ ಭೂತಳಕೆ ಉಗ್ಗಿಬಿದ್ದು-ಎದ್ದು ಶೀತೋಷ್ಣ ಮಲರೋಗ ಭೀತಿ ಲಾಲನೆಯಿಂದ ಮಾತೆಯ ಮೊಲಿಯನುಂಡು-ಉಂಡು ಆ ತರುವಾಯ ಉಪನೀತ ವಿವಹಗಳಲ್ಲಿ ಖ್ಯಾತನಾಗೀ ವಿಷಯ ವ್ರಾತ ಕೈಕೊಂಡೆನಯ್ಯ ಜೀಯ ||4|| ಯೌವನದಿ ಚತುರ್ವಿಂಶತಿ ತತ್ವನವ ಜರಿದು ಯುವತಿಯರ ರೂಪಲಾವಣ್ಯ ನೋಡಿ-ಬಾಡಿ ನೆವನೆವದಿ ಭೋಗಗಳ ಸವಿ ಸವಿದಿಪೇಕ್ಷಿಸಿ ಭವನ ಭವನವನು ಪೊಕ್ಕು -ಸೊಕ್ಕು ಅವರಿವರ ಜಾತಿಯೆನ್ನದೆ ಮಾತುಗಳನಾಡಿ ದಿವರಾತ್ರಿಯಲ್ಲಿ ಹೊರಳಿ-ಉರುಳಿ ಕವಿಜನರ ಧಿಕ್ಕರಿಸಿ ಕೋಣನಂತೆ ಸದಾ ಆವಧಿಯಿಲ್ಲದೆ ಕಾಲ ಕಳೆದೆ ಉಳಿದೆ ||5|| ಹೆಂಡ್ರು ಮಕ್ಕಳಿಗಾಗಿ ಎನ್ನ ಹಿತಮನೆ ಮರೆದು ಕಂಡಕಂಡವರ ಕಾಡಿ-ಬೇಡಿ ಉಂಡುಟ್ಟು ಸುಖಪಟ್ಟು ಪಾರತ್ರಯವ ಜರೆದು ಕೊಂಡೆಯಲಿ ನಿಪುಣನಾಗಿ ತೂಗಿ ಮಂಡೆಯನು ಬಲಿತ ಪಶುವಿನಂತೆ ಮದವೇರಿ ಚಂಡ ವೃತ್ತಿಯಲಿ ನಡೆದು-ನುಡಿದು ಹಿಂಡು ಮಾತೇನು ಈ ಜರೆನರೇ ಬಂದೆನ್ನ ಲಂಡತನ ಪೋಗದಕಟ್ಟ-ಉಂಬೆ ವಿಕಟ ||6|| ನಾನಾ ಯೋನಿಗಳಲ್ಲಿ ಬರಲಾರೆ ಬರಲಾರೆ ನಾನು ಪೇಳುವುದು ಏನೋ-ಇನ್ನೇನೊ ನೀ ನೋಡಿದರೆ ಅನ್ಯ ಕಾವ ದೈವರ ಕಾಣೆ ಮಾನಸದೊಳಗೆ ಒಮ್ಮೆ-ಇಮ್ಮೆ ದೀನರಕ್ಷಕ ಬಿರುದು ಅನವರತ ನಿನ್ನದು ಎಣಿಸದಿರು ಎನ್ನ ದೋಷ ಲೇಶ ಶ್ರೀನಾಥ ವಿಜಯವಿಠ್ಠಲರೇಯ ನೀನೊಲಿದು ಧ್ಯಾನದಲ್ಲಿ ಬಾರೊ ನಿಜ ಮೂರುತಿಯ ತೋರೊ ||7||

Thoughts & Reflections

0

No reflections shared yet. Be the first to share your thoughts!

Share your thought